ಬಂಟ್ವಾಳ: ಅಪ್ರಾಪ್ತ ಬಾಲಕಿಯ ಜತೆ ದೈಹಿಕ ಸಂಪರ್ಕ ಬೆಳೆಸಿ ಗಂಡು ಮಗುವಿನ ಜನನಕ್ಕೆ ಕಾರಣವಾದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಕಿನ್ನಿಗೋಳಿ ಕೊಲ್ಲೂರು ನಿವಾಸಿ ಅಶ್ವತ್ಥ ಆರೋಪಿ.ಪಾಣೆಮಂಗಳೂರು ಗ್ರಾಮದ ಉಪ್ಪುಗುಡ್ಡೆ ನಿವಾಸಿ ಅಪ್ರಾಪ್ತ ವಯಸ್ಕ ಬಾಲಕಿ ಸುಮಾರು 2 ವರ್ಷಗಳ ಹಿಂದೆ ಕಿನ್ನಿಗೋಳಿಯಲ್ಲಿ ನಡೆದ ಸ್ನೇಹಿತೆಯ ಮದುವೆಗೆ ತೆರಳಿದ್ದ ವೇಳೆ ಆರೋಪಿ ಅಶ್ವತ್ಥನ ಪರಿಚಯವಾಗಿ ಇಬ್ಬರೂ ಮೊಬೈಲ್ನಲ್ಲಿ ಸಂಪರ್ಕದಲ್ಲಿದ್ದರು.
ಬಾಲಕಿಯು ಕಳೆದ ವರ್ಷ 2 ಬಾರಿ ಆರೋಪಿಯ ಮನೆಗೆ ಹೋಗಿದ್ದಾಗ ಆತ ಅಲ್ಲೇ ಪಕ್ಕದಲ್ಲಿದ್ದ ಖಾಲಿ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಬಾಲಕಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮನೀಡಿದ್ದು, ಆರೋಪಿ ಅಶ್ವತ್ಥನ ವಿರುದ್ಧ ದೂರು ನೀಡಿದ್ದಾಳೆ. ಆಕೆಯ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ