ಮಂಗಳೂರು

ತಾಲೂಕಿನಲ್ಲಿ ಬುಧವಾರ ಮಳೆ ಪ್ರಮಾಣದಲ್ಲಿ ಇಳಿಕೆ

ಬೆಳ್ತಂಗಡಿ: ತಾಲೂಕಿನಲ್ಲಿ ಬುಧವಾರ ಮಳೆ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಸೋಮವಾರ ಸಂಜೆ ಆರಂಭವಾದ ಮಳೆ ಮಂಗಳವಾರ ಮಧ್ಯರಾತ್ರಿ ತನಕವೂ ನಿರಂತರವಾಗಿ ಮುಂದುವರೆಯಿತು. ಮಂಗಳವಾರ ದಿನವಿಡಿ ಭಾರಿ ಪ್ರಮಾಣದ ಮಳೆ ಸುರಿಯಿತು. ಈ ಭಾಗಗಳಲ್ಲಿ ಹೆಚ್ಚಿನ ಮಳೆ ಇದ್ದರೂ ನೇತ್ರಾವತಿ, ಮೃತ್ಯುಂಜಯ ನದಿಗಳಲ್ಲಿ ಭಾರಿ ಪ್ರಮಾಣದ ನೀರಿನ ಏರಿಕೆ ಕಂಡು ಬರಲಿಲ್ಲ. ನದಿಗಳ ಉಗಮ ಸ್ಥಾನ ಹಾಗೂ ಘಟ್ಟ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸುರಿಯದಿರುವುದು ಇದಕ್ಕೆ ಕಾರಣವಾಯಿತು. ನದಿಗಳು ಸಾಮಾನ್ಯ ಸ್ಥಿತಿಯತ್ತ ಮರಳಲಾರಂಭಿಸಿವೆ. ಬುಧವಾರ ಮೋಡ ಕವಿದ ವಾತಾವರಣವಿದ್ದು ಆಗಾಗ ಮಳೆ ಸುರಿಯಿತು.

ವಿಪರೀತ ಮಳೆ ಇದ್ದರೂ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ಯಾವುದೇ ವ್ಯತ್ಯಯ ಕಂಡುಬಂದಿಲ್ಲ. ಅಲ್ಲಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತ ಉಂಟಾಗಿದ್ದು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿಲ್ಲ. ಘಾಟಿ ಪ್ರದೇಶದಲ್ಲಿ ವಿಪರೀತ ಮಂಜಿನ ವಾತಾವರಣವಿದ್ದು ವಾಹನ ಸವಾರರು ಪರದಾಟ ನಡೆಸಿದರು. ಇಲ್ಲಿನ ಜಲಪಾತ ಪ್ರದೇಶಗಳು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರು ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ವೀಕ್ಷಿಸುವುದು ಸುಗಮ ಸಂಚಾರಕ್ಕೆ ಸಮಸ್ಯೆ ನೀಡುತ್ತಿದೆ. ಕೆಲವು ದಿನಗಳ ಹಿಂದೆ ಉಜಿರೆ- ಚಾರ್ಮಾಡಿ ಪ್ರದೇಶದ ಹೆದ್ದಾರಿ ಹೊಂಡಗಳನ್ನು ಮುಚ್ಚಲಾಗಿತ್ತು. ಮಳೆಯಿಂದ ಮತ್ತೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿವೆ.

ಘಾಟಿ ಪ್ರದೇಶದಲ್ಲಿ ಪ್ರಕೃತಿ ವಿಕೋಪದಿಂದ ಉಂಟಾಗುವ ತೊಂದರೆಗಳನ್ನು ಎದುರಿಸಲು ಹಾಗೂ ಸಂಚಾರಕ್ಕೆ ಸಮಸ್ಯೆ ಉಂಟಾಗದಂತೆ ಎರಡು ಜೆಸಿಬಿ ವಾಹನ ಹಾಗೂ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.”

Swathi MG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago