Categories: ಮಂಗಳೂರು

ಮಳೆ ಹಿನ್ನಲೆ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ನಿರ್ಬಂಧ

ಮಂಗಳೂರು, ಮೇ.17: ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗಲಿರುವ ಹಿನ್ನಲೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಿ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಮೇ 19 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ ಮೊದಲ ವಾರದಲ್ಲೇ ಕರಾವಳಿಗೆ ಮಾನ್ಸೂನ್ ಕೂಡ ಆಗಮಿಸುವ ಸಾಧ್ಯತೆ ಹಿನ್ನಲೆ ಈ ನಿರ್ಬಂಧಗಳನ್ನು ಹೇರಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gayathri SG

Recent Posts

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

31 seconds ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

11 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

26 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

48 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago