Categories: ಮಂಗಳೂರು

ಮಾ.28 ರಂದು ಸೋಮವಾರ ಪುರಸಭಾ ಇಲಾಖೆಯಲ್ಲಿ ಸಭೆ

ಬಂಟ್ವಾಳ : ಕೊರೊನಾ ಸಂಕಷ್ಟದ ದಿನಗಳಲ್ಲಿ ತೆರಿಗೆ ಪರಿಷ್ಕರಣೆ ಮಾಡದೆ ಮುಂದೂಡುವಂತೆ ಇಂದು ನಡೆದ ಪುರಸಭಾ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದ್ದಲ್ಲದೆ ಈ ಬಗ್ಗೆ ತೀರ್ಮಾನ ಕೈಗೊಂಡು ಸರಕಾರಕ್ಕೆ ಪತ್ರ ಬರೆಯುವಂತೆ ಒತ್ತಾಯ ಮಾಡಿದರು.
ಬಂಟ್ವಾಳ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ಮಾ.28 ರಂದು ಸೋಮವಾರ ಪುರಸಭಾ ಇಲಾಖೆಯಲ್ಲಿ ಸಭೆ ನಡೆಯಿತು.
ಗ್ರಾ.ಪಂ.ನಿಂದ ಹಿಡಿದು ಶಾಸಕರ ವರೆಗೆ ಗೌರವ ಧನ ಹೆಚ್ಚಳಮಾಡುತ್ತಿದ್ದಾರೆ, ಆದರೆ ಪಟ್ಟಣ ಪಂಚಾಯತ್ ಹಾಗೂ ಪುರಸಭೆಯ ಸದಸ್ಯರ ಗೌರವ ಧನವನ್ನು ಸರಕಾರದಿಂದ  10 ಸಾವಿರಕ್ಕೆ ಹೆಚ್ಚಳ ಮಾಡುವಂತೆ,  ಪಿಂಚಣಿ ಹಾಗೂ ಜೀವವಿಮೆಯನ್ನು ನೀಡುವಂತೆ ಸರಕಾರಕ್ಕೆ ಪತ್ರಬರೆಯುವಂತೆ  ಸದಸ್ಯ ವಾಸುಪೂಜಾರಿ ಸಭೆಯ ಅಧ್ಯಕ್ಷ ರ ಗಮನಕ್ಕೆ ತಂದರು.
ಕೊರೊನಾ ಸಂಕಷ್ಟದ ನೆಪವೊಡ್ಡಿ ತೆರಿಗೆ ಜಾಸ್ತಿ ಮಾಡದಂತೆ ನಾವು ವಿರೋಧ ವ್ಯಕ್ತಪಡಿಸಿದ್ದೇವೆ,  ಹಾಗಿರುವಾಗ ನಾವು ಹೇಗೆ ಗೌರವ ಧನ ಹೆಚ್ಚಳ ಮಾಡುವಂತೆ ಕೇಳುವುದು, ಅದರ ಬದಲಾಗಿ ನಮ್ಮ ನಮ್ಮ ವಾರ್ಡ್ ಗಳಿಗೆ ಅನುದಾನ ಜಾಸ್ತಿ ಕೇಳಿದರೆ ನಮ್ಮ ಗೌರವ ಜಾಸ್ತಿ ಯಾಗುತ್ತದೆ ಎಂದು ಸದಸ್ಯ ಪುರಸಭಾ ಸದಸ್ಯ ಹರಿಪ್ರಸಾದ್ ಹೇಳಿದರು.
ಕಸ ಬಿಸಾಡುವುದನ್ನು ತಪ್ಪಿಸುವ ಸಲುವಾಗಿ ಪುರಸಭಾ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಲ್ಲಿ ಒಟ್ಟು 25  ಸಿ.ಸಿ.ಕ್ಯಾಮರಾ ಅಳವಡಿಸಲಾಗಿದ್ದು,  ಇನ್ನು 2 ಸಿ.ಸಿ.ಕ್ಯಾಮರಾ ಗಳನ್ನು ಅಳವಡಿಸಲಾಗುವುದು ಎಂದು ಸಭೆಯಲ್ಲಿ ಸದಸ್ಯರ ಗಮನಕ್ಕೆ ತಂದರು. ಇದೇ ವೇಳೆ ಉಪಯೋಗಕ್ಕೆ ಬಾರದ ಸಿ.ಸಿ.ಕ್ಯಾಮರಾ ಅಳವಡಿಸಿದ್ದು ಯಾಕೆ? ಎಂದು ಸದಸ್ಯ ಅಬುಬಕ್ಕರ್ ಸಿದ್ದೀಕ್  ಆಕ್ರೋಶ ವ್ಯಕ್ತಪಡಿಸಿದರು.
ಸಿ.ಸಿ.ಕ್ಯಾಮರಾ ಅಳವಡಿಸಲಾಗಿರುವ ಸ್ಥಳದಲ್ಲಿ ಯೇ ಕಸ ತಂದು ಹಾಕುತ್ತಾರೆ, ಅಂತಹವರ ಮೇಲೆ ಗರಿಷ್ಠ ಪ್ರಮಾಣದ ದಂಡ ವಿಧಿಸುವಂತೆ ಸಭೆಯಲ್ಲಿ ಸದಸ್ಯರು ಒತ್ತಾಯ ಮಾಡಿದರು.
ಗ್ರಾ.ಪಂ.ವ್ಯಾಪ್ತಿಯ ಜನರು ಪುರಸಭಾ ವ್ಯಾಪ್ತಿಗೆ ಕಸ ತಂದು ಹಾಕುತ್ತಿದ್ದು, ಇವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಭೆಯಲ್ಲಿ ಒತ್ತಾಯ ಮಾಡಿದರು. ಈ ಬಗ್ಗೆ ವಿಶೇಷ  ಹರಿಸಿ ತಡೆಗೆ ಕ್ರಮಕೈಗೊಳ್ಳುವುದು ಎಂದು ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ವಿಶ್ವಾಸ ವ್ಯಕ್ತಪಡಿಸಿದರು. ಪುರಸಭಾ ಉಪಾಧ್ಯಕ್ಷೆ ಜೆಸಿಂತಾ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಉಪಸ್ಥಿತರಿದ್ದರು.
Sneha Gowda

Recent Posts

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

19 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

27 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

46 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

1 hour ago