News Karnataka Kannada
Monday, April 29 2024
ಮಂಗಳೂರು

ಮೀನಿನ ಫ್ಯಾಕ್ಟರಿಯ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿಕೆ

Latest News
Photo Credit :

ಮಂಗಳೂರು: ಇಲ್ಲಿನ ಹೊರವಲಯದ  ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿದೆ.

ಶ್ರೀ ಉಲ್ಕಾ ಎಲ್ ಎಲ್ ಪಿ ಮೀನು ಸಂಸ್ಕರಣಾ ಕಂಪೆನಿಯ ತ್ಯಾಜ್ಯ ಸಂಗ್ರಹ ತೊಟ್ಟಿಯಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ.

ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್ ಅನ್ನು ಶುಚಿಗೊಳಿಸಲು ಕೆಳಗಿಳಿದಿದ್ದ ಈ ವೇಳೆ ಏಕಾಏಕಿ ವಿಷಾನಿಲ ಸೋರಿಕೆಯಾಗಿ ಆತ ಅಸ್ವಸ್ಥಗೊಂಡು ಬಿದ್ದಿದ್ದ ಕೂಡಲೇ ಆತನನ್ನು ರಕ್ಷಿಸಲು 8ಕಾರ್ಮಿಕರು ಹೋಗಿದ್ದಾರೆ ಈ ವೇಳೆ ಅವರು ಕೂಡ ಅಸ್ವಸ್ಥಗೊಂಡರು ಉಸಿರಾಟ ಏರುಪೇರಾಗಿತ್ತು.

ಕೂಡಲೇ ಅವರೆಲ್ಲರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಮೂವರು ಮೃತಪಟ್ಟಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಐವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ , ಮತ್ತು ಮಿರಾಜ್ ಯುಲ್ ಇಸ್ಲಾಮ್ , ಶರಫತ್ ಅಲಿ ಮೃತ ದುರ್ದೈವಿಗಳು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಅಜಾನ್ಅಲಿ, ಕರಿಬುಲ್ಲ, ಅಫ್ತಾಲ್ ಮಲಿಕ್ ಅವರಿಗೆ ಆಸ್ಪತ್ರೆಯ ಚಿಕಿತ್ಸೆ ಮುಂದುವರಿಸಲಾಗಿದೆ ಮೃತರ ಕುಟುಂಬಕ್ಕೆ ಮಾಹಿತಿ ನೀಡಿದ್ದು ಮೃತದೇಹಗಳನ್ನು ಮಂಗಳೂರಿನ ಎ ಜೆ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು