Categories: ಮಂಗಳೂರು

ಮುಂಡಾಜೆಯಲ್ಲಿ “ಶಾಂತಿವನ- ಮಹಾತ್ಮಾ ಗಾಂಧಿ ಕಟ್ಟೆ” ನಾಮಫಲಕ ಅನಾವರಣ

ಬೆಳ್ತಂಗಡಿ : ಊರಿನ ಹಿರಿಯರ ಚಿಂತನೆಯಿಂದ ಇಲ್ಲಿ ನೆಡಲಾಗಿರುವ ಆಲದ ಮರದ ಈ ಪ್ರದೇಶ ಅಭಿವೃದ್ಧಿಯಾಗಬೇಕೆಂಬುದು ಗ್ರಾಮ ಪಂಚಾಯತ್ ನ ಮಹತ್ವಾಕಾಂಕ್ಷೆಯ ಕಲ್ಪನೆ. ಆ ನಿಟ್ಟಿನಲ್ಲಿ ಇದಕ್ಕೆ ಇಂಟರ್‌ಲಾಕ್ ಅಳವಡಿಕೆ, ಕಟ್ಟೆ ನಿರ್ಮಾಣ, ಮುಂದಿನ ವರ್ಷ ಗಾಂಧಿ ಪ್ರತಿಮೆಯೊಂದಿಗೆ ಇಲ್ಲಿ ಗಾಂಧಿ ಜಯಂತಿ ಆಚರಿಸುವಂತೆ ಮಾಡೋಣ ಎಂದು ಶಾಸಕ ಹರೀಶ್ ಪೂಂಜ ವಿಶ್ವಾಸ ವ್ಯಕ್ತಪಡಿಸಿದರು.

73 ವರ್ಷಗಳ ಹಿಂದೆ ಮಹಾತ್ಮಾ ಗಾಂಧೀಜಿಯವರ ಚಿತಾಭಸ್ಮ ಹಾಕಿ ನೆಡಲಾಗಿರುವ ಆಲದ ಮರದ ಜಾಗದಲ್ಲಿ ಗ್ರಾಮ ಪಂಚಾಯತ್ ಮುಂಡಾಜೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಮಫಲಕ ಅನಾವರಣಗೊಳಿಸಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ರಂಜಿನಿ ವಹಿಸಿದ್ದರು. ಶಿಕ್ಷಕ ಅರವಿಂದ ಚೊಕ್ಕಾಡಿ ಸಂದೇಶ ಭಾಷಣ ಮಾಡಿದರು.

ಸಮಾರಂಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ದಿಶಾ ಪಟವರ್ಧನ್, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ಯಶೋಧಾ, ಅಶ್ವಿನಿ ಮತ್ತು ವಿಮಲಾ, ಸದ್ರಿ ಜಾಗ ದಾನ ನೀಡಿದ ಗೋವಿಂದ ಮನ್ಮಥ ಮರಾಠೆ ಅವರ ಪುತ್ರ ರವೀಂದ್ರ ಮರಾಠೆ, ಊರ ಹಿರಿಯರಾದ ಅಡೂರು ವೆಂಕಟ್ರಾಯ, ಗಾಂಧಿ ವಿಚಾರ ವೇದಿಕೆ ಮಾತೃ ಸಮಿತಿ ಅಧ್ಯಕ್ಷ ಶ್ರೀಧರ ಜಿ ಭಿಡೆ, ಮಿಲ್ಕ್ ಸೊಸೈಟಿ ಅಧ್ಯಕ್ಷ ಮಚ್ಚಿಮಲೆ ಅನಂತ ಭಟ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಸಂಚಾಲಕ ನಾರಾಯಣ ಗೌಡ ಕೊಳಂಬೆ, ಮುಂಡಾಜೆ ಪ.ಪೂ ಕಾಲೇಜು ಪ್ರಾಂಶುಪಾಲೆ ಜ್ವಾಲಿ ಡಿಸೋಜಾ,  ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ, ಹಾಗೂ ವಿಠಲ ರಾವ್ ಸಂಪಿಗೆ, ಅರೆಕ್ಕಲ್ ರಾಮಚಂದ್ರ ಭಟ್, ಅನಂತ ರಾವ್ ಚಾರ್ಮಾಡಿ, ವಿಶ್ವನಾಥ ಬೆಂಡೆ, ನಾಗಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

ಗ್ರಾ.ಪಂ ಪಿಡಿಒ ಸುಮಾ ಎ.ಎಸ್ ಪ್ರಸ್ತಾಪಿಸಿ ಸ್ವಾಗತಿಸಿದರು. ಸಮಾರಂಭದ ಬಳಿಕ ರೋಟರಿ ಸಮುದಾಯ ದಳ, ಮುಂಡಾಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕ ಮತ್ತು ಗ್ರಾ.ಪಂ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ, ಸ್ವಚ್ಚತಾ ಮ್ಯಾರಥಾನ್ ನಡೆಯಿತು.

Raksha Deshpande

Recent Posts

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

9 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

25 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

33 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

52 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

2 hours ago