Categories: ಮಂಗಳೂರು

ಮುಂಡಾಜೆ: ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಮುಂಡಾಜೆ ಬಾಲಕೃಷ್ಣ ಸಹಸ್ರ ಬುದ್ಧೆಯವರು ಬರೆದ ‘ಬಾಳಪ್ಪನ ಬರಹಗಳು’ ಪುಸ್ತಕದ ಬಿಡುಗಡೆ ಸಮಾರಂಭ ಇಲ್ಲಿನ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಶುಕ್ರವಾರ ಜರಗಿತು.

ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ ಪುಸ್ತಕ ಬಿಡುಗಡೆ ಗೊಳಿಸಿ ಮಾತನಾಡಿ ಲೇಖಕರು ಬೆಳೆದು ಬಂದ ರೀತಿ ಕೃತಿಗಳು ಮೂಡಲು ಕಾರಣವಾಗುತ್ತದೆ.ಸಮಾಜದ ಅಂಕು ಡೊಂಕುಗಳನ್ನು ತಿದ್ದುವ,ಉತ್ತಮ ಸಂದೇಶ ಸಾರುವ ಕೃತಿಗಳು ಲೇಖಕರ ಯಶಸ್ಸಿಗೆ ಸಹಕಾರಿ,ಲೇಖಕನಿಂದ ಉತ್ತಮ ಕೃತಿ ಹೊರಬರಲು ಪ್ರೇರಣೆ ಅವಶ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಶ್ರೀಕರ ಮರಾಠೆ ಮಾತನಾಡಿ ಗುಪ್ತ ಗಾಮಿನಿಯಾದ ಸರಸ್ವತಿ ಕೃತಿಗಳ ಮೂಲಕ ಧಾರೆಯಾಗಿ ಹರಿಯುತ್ತಾಳೆ. ಪ್ರತಿಯೊಂದು ಕೃತಿಯಲ್ಲಿ ಚಿಂತಿಸ ಬೇಕಾದ ವಿಚಾರಗಳಿವೆ.ಓದಿನ ಜತೆ ಕೃತಿಗಳಲ್ಲಿರುವ ಸಂದೇಶಗಳನ್ನು ಮನನ ಮಾಡಿ ಕೊಳ್ಳುವುದು ಮುಖ್ಯ ಎಂದು ಹೇಳಿದರು.

ಮುಂಡಾಜೆ ಪ್ಯಾಕ್ಸ್ ಸಿಇಒ ನಾರಾಯಣ ಫಡ್ಕೆ,ಲೇಖಕ ಸದಾನಂದ ಬಿ.ಶುಭ ಹಾರೈಸಿದರು. ವೀರೇಶ್ವರ ಸಹಸ್ರ ಬುದ್ಧೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ನವಮಿ ಗೋಗಟೆ ಸ್ವಾಗತಿಸಿದರು ಉಜಿರೆ ಎಸ್. ಡಿ.ಎಂ. ಕಾಲೇಜಿನ ಪ್ರಾಧ್ಯಾಪಕ ಗಣೇಶ್ ಶೆಂಡ್ಯೆ ಕಾರ್ಯಕ್ರಮ ನಿರೂಪಿಸಿದರು.ಸುವರ್ಣಾ ನರೇಂದ್ರ ವಂದಿಸಿದರು.

Raksha Deshpande

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

15 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

35 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

35 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

37 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

50 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

59 mins ago