ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ಸುರತ್ಕಲ್ ಸಮೀಪದ ಮುಕ್ಕದಲ್ಲಿ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.ಇದರಿಂದ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಮುಕ್ಕ ಬಳಿ ಹೆದ್ದಾರಿಯಲ್ಲೇ ಪಲ್ಟಿ ಹೊಡೆಯಿತು. ಇದರಿಂದ ಲಾರಿಯಲ್ಲಿದ್ದ ಮೀನಿನ ಬಾಕ್ಸ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಮೀನು ರಸ್ತೆಯಲ್ಲಿ ಚೆಲ್ಲಿದೆ. ಮೀನಿನ ಎಣ್ಣೆ ತೆಗೆಯುವ ಕಾರ್ಖಾನೆಗೆ ಕೊಳೆತ ಮೀನುಗಳನ್ನು ಈ ಲಾರಿಯಲ್ಲಿ ಸಾಗಿಸುತ್ತಿತ್ತು ಎನ್ನಲಾಗಿದೆ. ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದ ಹೆದ್ದಾರಿಯು ಸಂಪೂರ್ಣ ಬ್ಲಾಕ್ ಆಗಿದ್ದು, ಬಳಿಕ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.