Categories: ಮಂಗಳೂರು

ಮೇ 1ರಂದು ವಿಜೃಂಭಣೆಯ ಕಾರ್ಮಿಕರ ದಿನಾಚರಣೆ :ನೇಮಿರಾಜ್ ಕಿಲ್ಲೂರು

ಬೆಳ್ತಂಗಡಿ: ವಿಶ್ವ ಜ್ಞಾನದ ಸಂಕೇತ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 131 ನೆಯ ಜನ್ಮದಿನಾಚರಣೆ ಹಾಗೂ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವು ಮೇ 1 ರಂದು ಕೊಯ್ಯೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕ ನೇಮಿರಾಜ್ ಕಿಲ್ಲೂರು ತಿಳಿಸಿದ್ದಾರೆ.

ಬೆಳ್ತಂಗಡಿ ಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮವು ಮೇ 1 ರಂದು ಬೆಳಗ್ಗೆ 10 ಘಂಟೆಗೆ ಶ್ರೀ ಪಂಚದುರ್ಗಾ ಸಹಕಾರಿ ಸಭಾಭವನ ಆದೂರುಪೆರಾಲ್ ಕೊಯ್ಯೂರು ಇಲ್ಲಿ ನಡೆಯಲಿದೆ. ಕಾರ್ಯಕ್ರಮದ ಪ್ರಮುಖ ಭಾಷಣಕಾರರಾಗಿ ನಾಡಿನ ಚಿಂತಕ, ಪ್ರಗತಿಪರ ಸ್ವಾಮೀಜಿಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮೈಸೂರಿನ ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ. ಭೀಮಾ ರಮಾ ಯುವ ವೇದಿಕೆ ಕೊಯ್ಯೂರು ಅಧ್ಯಕ್ಷ ಪ್ರತೀಶ್ ಬಿ ಕೊಯ್ಯೂರು ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ & ಸತ್ರ ನ್ಯಾಯಾಲಯದ ಹಿರಿಯ ಸಹಾಯಕ ಅಭಿಯೋಜಕರಾದ ವಿನಯರಾಣಿ, ಬೆಸ್ಟ್ ಫೌಂಡೇಶನ್ (ರಿ) ಬೆಳ್ತಂಗಡಿ ಅಧ್ಯಕ್ಷ, ರಾಜ್ಯ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ಹಿರಿಯ ಸಾಹಿತಿ, ಸಾಮಾಜಿಕ ಹೋರಾಟಗಾರ್ತಿ ಅತ್ರಾಡಿ ಅಮೃತಾ ಶೆಟ್ಟಿ, ವಿಮುಕ್ತಿ ಸಂಸ್ಥೆ ದಯಾಳ್ ಬಾಗ್ ನಿರ್ದೇಶಕ ವಂದನೀಯ ಫಾ||ವಿನೋದ್ ಮಸ್ಕರೇನ್ಹಸ್, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 5 ಗಂಟೆಯಿಂದ ಭಾರತೀಯ ಚಲನಚಿತ್ರ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ ಜೈಭೀಮ್ ಚಲನಚಿತ್ರ ಪ್ರದರ್ಶನಗೊಳ್ಳಲಿದೆ. ಅಂಬೇಡ್ಕರ್ ಜಯಂತಿ ಕೇವಲ ಸಭಾ ಕಾರ್ಯಕ್ರಮಕ್ಕೆ ಸೀಮಿತಗೊಳ್ಳದೆ ಊರಿನ ಜಾತ್ರೆಯಂತೆ ಹೊಸ ರೀತಿಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ವೆಂಕಣ್ಣ ಕೊಯ್ಯೂರು, ಜಿಲ್ಲಾ ಕಾರ್ಯಕಾರಿ ಸದಸ್ಯರು, ದ.ಸಂ.ಸ.ಅಂಬೇಡ್ಕರ್ ವಾದ, ಜಿಲ್ಲಾ ಶಾಖೆ ಮಂಗಳೂರು, ಪ್ರತೀಶ್ ಬಿ., ಅಧ್ಯಕ್ಷರು ಭೀಮ್ ರಮಾ ಯುವ ವೇದಿಕೆ ಕೊಯ್ಯೂರು, ನಿತೇಶ್ ಕೆ.ವಿ, ಕೋಶಾಧಿಕಾರಿ ಭೀಮ್ ರಮಾ ಯುವ ವೇದಿಕೆ ಕೊಯ್ಯೂರು, ತಿಲಕ್ ನಾಥ್, ಸಾಂಸ್ಕೃತಿಕ ಕಾರ್ಯದರ್ಶಿ ಭೀಮ್ ರಮಾ ಯುವ ವೇದಿಕೆ ಕೊಯ್ಯೂರು ಇವರು ಉಪಸ್ಥಿತರಿದ್ದರು.

Ashika S

Recent Posts

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

4 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

28 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

39 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

50 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

60 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

1 hour ago