Categories: ಮಂಗಳೂರು

ಮೋದಿಯವರ ನಾಯಕತ್ವದ ಕಾರಣಕ್ಕೆ ಭಾರತ ಇಂದು ಬಲಿಷ್ಠವಾಗಿದೆ : ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಪ್ರಧಾನಿ ‌ಮೋದಿಯವರ ನಾಯಕತ್ವದ ಕಾರಣಕ್ಕೆ ಭಾರತ ಇಂದು ಬಲಿಷ್ಠವಾಗಿ ನಿಂತಿದ್ದು, ಪಕ್ಷದ ಸಿದ್ಧಾಂತಕ್ಕೆ ಬದ್ಧವಾಗಿ ಸೂಚನೆ ಪಾಲಿಸಿಕೊಂಡು ಕೆಲಸ ಮಾಡಿದಾಗ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಬಂಟ್ವಾಳ ‌ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ಬಿ.ಸಿ.ರೋಡಿನ ಶಿವಳ್ಳಿ ಸಭಾಭವನದಲ್ಲಿ ಬಂಟ್ವಾಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆಯನ್ನು ಉದ್ಘಾಟಿಸಿದರು.
ಒಬಿಸಿ ಸಮುದಾಯದ ಬಹುತೇಕ ಮಂದಿ ಬಿಜೆಪಿಯ ಮತದಾರರಾಗಿದ್ದು, ಹೀಗಾಗಿ ಮೋರ್ಚಾ ಪಕ್ಷಕ್ಕೆ ದೊಡ್ಡ ಕೊಡುಗೆಯನ್ನು ನೀಡುತ್ತಿದೆ. ಯುಪಿಯಲ್ಲಿಯೂ ಒಬಿಸಿ ಮತದಾರರು ಬಿಜೆಪಿ ಪರ ನಿಂತ ಕಾರಣಕ್ಕೆ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಮೋರ್ಚಾಗಳು ಯಶಸ್ವಿಯಾಗಿ ಕೆಲಸ ಮಾಡಿದಾಗ ಪಕ್ಷ ಬಲಿಷ್ಠಗೊಳ್ಳಲು ಸಾಧ್ಯವಾಗಿದೆ.
ಕಾರ್ಯಕರ್ತರಿಗೆ ಬೆಂಬಲವಾಗಿ ನಿಲ್ಲುವ ‌ಕುಟುಂಬಕ್ಕಾಗಿ ಬಂಟ್ವಾಳದಲ್ಲಿ ಕುಟುಂಬ ಮಿಲನ ಕಾರ್ಯಕ್ರಮ ಮಾಡಿ ಯಶಸ್ವಿಯಾಗಿದೆ ಎಂದು‌ಅವರು ಹೇಳಿದರು.
ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ, ಕಾರ್ಯಕಾರಿಣಿ ಸದಸ್ಯ ಕುಮಾರ್ ರಾಮಚಂದ್ರಪ್ಪ,  ಪ್ರಭಾರಿ ರಾಜೇಶ್ ಪಿಲಾರ್, ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ, ಮಹೇಶ್, ಉದಯಕುಮಾರ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಉಪಸ್ಥಿತರಿದ್ದರು.
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್ ಪ್ರಸ್ತಾವನೆಗೈದರು. ಬಂಟ್ವಾಳ ಒಬಿಸಿ ಮೋರ್ಚಾ ಅಧ್ಯಕ್ಷ ‌ಆನಂದ ಶಂಭೂರು ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.
Sneha Gowda

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

17 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

19 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

33 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

49 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

1 hour ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

1 hour ago