Categories: ಮಂಗಳೂರು

ಮೋದಿ ದೇಶವನ್ನು ಪರಿವರ್ತನೆ ಮಾಡಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು

ಬಂಟ್ವಾಳ: ಪ್ರಧಾನಿ ಮೋದಿ ಆಡಳಿತದಿಂದ ದೇಶದಲ್ಲಿ ಭಯೋತ್ಪಾಧನೆ ನಿಂತಿದ್ದು, ದೇಶದ ಯಾವ ಹಳ್ಳಿಯಲ್ಲೂ ಬಾಂಬ್ ಸಿಡಿದಿಲ್ಲ. ಬಿಜೆಪಿ ಆಡಳಿತದಲ್ಲಿ ನಕ್ಸಲ್ ಚಟುವಟಿಕೆಯೂ ಸಂಪೂರ್ಣ ನಿಂತು ಹೋಗಿದೆ. ಆಡಳಿತ, ರಾಜಕೀಯ, ಸಾಂಸ್ಕೃತಿಕವಾಗಿ ಹೀಗೆ ಮೂರು ರೀತಿಯಲ್ಲಿ ಮೋದಿ ದೇಶವನ್ನು ಪರಿವರ್ತನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಹೇಳಿದರು.

ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ 8ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರದಿಂದ ಹಮ್ಮಿಕೊಂಡಿದ್ದ ವಿಕಾಸ್ ತೀರ್ಥ ಬೈಕ್ ರ‍್ಯಾಲಿಯ ಸಮಾರೋಪ ಸಮಾರಂಭವನ್ನುಉದ್ಘಾಟಿಸಿ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ  ಮಾತನಾಡಿದರು.

ದೇಶದಲ್ಲಿ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ಭ್ರಷ್ಟಾಚಾರ, ಭಯೋತ್ಪಾದನೆ, ವಂಶಾಡಳಿತದ ಕೊಡುಗೆ ನೀಡಿದೆ. ರಷ್ಯಾ- ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಅಲ್ಲಿನ ಅಧ್ಯಕ್ಷರು-ಪ್ರಧಾನಿಯ ಬಳಿ ಮಾತನಾಡಿ 4 ಬಾರಿ ಯುದ್ಧ ನಿಲ್ಲಿಸಿ 22000 ಭಾರತೀಯ ವಿದ್ಯಾರ್ಥಿಗಳ ಜತೆಗೆ ಪಕ್ಕದ ರಾಷ್ಟ್ರದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತಂದಿದ್ದಾರೆ. ಅಯೋಧ್ಯೆ ಶ್ರೀರಾಮ ಮಂದಿರ, ಕಾಶಿಯಲ್ಲಿ ಶ್ರೀ ವಿಶ್ವನಾಥ ಸನ್ನಿಧಿ ಪುನರ್ ನಿರ್ಮಾಣ ಮೋದಿ ಕಾಲಘಟ್ಟದಲ್ಲಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕ್ರಿ.ಪೂ, ಕ್ರಿ.ಶಕ‌ ದ ಮಾದರಿಯಲ್ಲೇ ಮೋದಿ ಪೂರ್ವ , ಮೋದಿ‌ ನಂತರ ಎಂಬ ಕಾಲಮಾನ ಬಂದರೂ ಅಚ್ಚರಿ ಇಲ್ಲ ಎಂದು ಅವರು ಹೇಳಿದರು.

ಇಡೀ ರಾಜ್ಯದಲ್ಲಿ ಯುವ ಮೋರ್ಚಾವು ಸಂಘಟಿತ ಶಕ್ತಿಯಾಗಿ ಕೆಲಸ ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ| ಸಂದೀಪ್ ಕುಮಾರ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಮಾತನಾಡಿದರು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರತಿ ಕ್ಷೇತ್ರದ ತಲಾ 10 ಮಂದಿ ಯುವ ಸಾಧಕರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಯುವ ಮೋರ್ಚಾ ಪ್ರಭಾರಿ ಸತೀಶ್ ಕುಂಪಲ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಕುಮಾರಿ, ವಿಧಾನ ಮಂಡಲಗಳ ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ ಬೆಳಾಲು, ಭರತ್‌ರಾಜ್ ಕೃಷ್ಣಾಪುರ, ಸಚಿನ್‌ರಾಜ್ ರೈ, ಸಚಿನ್ ಮೋರೆ, ಸಚಿನ್ ಶೆಣೈ, ನವೀನ್, ಕೃಷ್ಣ ಎಂ.ಆರ್., ಅಶ್ವಥ್ ಪಣಪಿಲ ವೇದಿಕೆಯಲ್ಲಿದ್ದರು.

ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಸ್ವಾಗತಿಸಿ, ಮತ್ತೋರ್ವ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಮಾರ್ನಾಡ್ ವಂದಿಸಿದರು. ಯತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

Ashika S

Recent Posts

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

15 mins ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

26 mins ago

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

38 mins ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

43 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

49 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

59 mins ago