News Karnataka Kannada
Sunday, May 05 2024
ಮಂಗಳೂರು

ಯುವಜನತೆ ಕ್ರೀಡಾ ಆಸಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ರಘುವೀರ್ ಎಸ್

Manglore
Photo Credit :
ಮಂಗಳೂರು: ನೆಹರು ಯುವಕೇಂದ್ರ ಮಂಗಳೂರು, ಪಕ್ಕಲಡ್ಕ ಯುವಕ ಮಂಡಲ( ರಿ) ಇದರ ಸಂಯುಕ್ತ ಆಶ್ರಯಲ್ಲಿ ಇಂದು ಪಕ್ಕಲಡ್ಕದ ಮೈದಾನದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ರಘವೀರ್ ಎಸ್ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು. ಯುವಜನರು ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕಾದರೆ ಜೀವನದಲ್ಲಿ ಕ್ರೀಡೆ ಅನ್ನೋದು ಬಹಳ ಮುಖ್ಯ.
ಕ್ರೀಡಾ ಮನೋಭಾವನೆಯನ್ನು ಮೈಗೂಡಿಸಿಕೊಂಡು ಮುಂದೆ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು ಆ ಮೂಲಕ ರಾಷ್ಟ್ರಮಟ್ಟದ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಇತರರಿಗೆ ಮಾದರಿಯಾಗಿರಬೇಕು ಎಂದರು.
ಈ ವೇಳೆ ವೇದಿಕೆಯಲ್ಲಿ ಅತಿಥಿಗಳಾಗಿ ಜಗದೀಶ್, ಮನಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಜಪ್ಪಿನಮೊಗರು ಗ್ರಾಮ ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಉದಯಚಂದ್ರ ರೈ, ಸಾಮಾಜಿಕ ಕಾರ್ಯಕರ್ತ ಸೌಹಾನ್ ಎಸ್.ಕೆ, ಯುವಜನ ಮುಂಡರಾದ ಸಂತೋಷ್ ಬಜಾಲ್ ಉಪಸ್ಥಿತರಿದ್ದರು.
ಸಭೆಯ ಅಧ್ಯಕ್ಷತೆಯನ್ನು ಪಕ್ಕಲಡ್ಕ ಯುವಕ ಮಂಡಲದ ಅಧ್ಯಕ್ಷರಾದ ದೀಪಕ್ ಬಜಾಲ್ ವಹಿಸಿದ್ದರು. ಕಾರ್ಯಕ್ರಮವನ್ನು ನಾಗರಾಜ್ ಬಜಾಲ್ ನಿರೂಪಿಸಿದರು. ಕ್ರೀಡಾಕೂಟದ ನೇತೃತ್ವವನ್ನು ಯುವಕ ಮಂಡಲದ ಕಾರ್ಯದರ್ಶಿ ಪ್ರೀತೇಶ್ ಬಜಾಲ್, ಧೀಕ್ಷಿತ್ ಭಂಡಾರಿ, ಪ್ರಕಾಶ್ ಶೆಟ್ಟಿ, ಜಗದೀಶ್, ಧಿರಾಜ್, ನೂರುದ್ದೀನ್ ಮುಂತಾದವರು ವಹಿಸಿದ್ದರು.
ಕ್ರೀಡಾಕೂಟದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗಜಗ್ಗಾಟ ಹಾಗೂ ವೈಯಕ್ತಿಕ ವಿಭಾಗದಲ್ಲಿ ಹಲವು ಬಗೆಯ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಕೊನೆಗೆ ಕ್ರೀಡೆಯಲ್ಲಿ ವಿಜೇತರಾದ ತಂಡಗಳಿಗೆ ಪ್ರಶಸ್ತಿ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಲಾಯಿತು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು