News Karnataka Kannada
Saturday, May 11 2024
ಮಂಗಳೂರು

ಯೂಟ್ಯೂಬ್ ಚಾನೆಲ್ ನಲ್ಲಿ ಯುವತಿಯ ಪೋಟೋ ದುರುಪಯೋಗ ಹಿನ್ನೆಲೆ ದಂಪತಿಗಳು ಬಂಧನ

8 YouTube channels blocked for airing fake anti-India content
Photo Credit :

ಬಂಟ್ವಾಳ : ಹಣಗಳಿಸುವ ಉದ್ದೇಶದಿಂದ ಯೂಟ್ಯೂಬ್ ಚಾನೆಲ್ ನಲ್ಲಿ ಯುವತಿಯ ಪೋಟೋ ದುರುಪಯೋಗ ಮಾಡಿದ್ದ ಆರೋಪದಲ್ಲಿ ದಂಪತಿಯನ್ನು ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ನೇತ್ರತ್ವದ ತಂಡ ಶಿವಮೊಗ್ಗ ದಲ್ಲಿ ಬಂಧಿಸಿದ್ದಾರೆ.

ಬಂಟ್ವಾಳ ಮೂಲದ ಪ್ರತಿಷ್ಠಿತ ಕುಟುಂಬದ ಯುವತಿಯೋರ್ವಳ ಪೋಟೋ ಒಂದನ್ನು ಕನ್ನಡ ಲೈಟ್ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ ಬಳಕೆ ಮಾಡಿಕೊಂಡಿದ್ದರು ಎಂಬ ದೂರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ದಾಖಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಎಸ್.ಐ.ಅವಿನಾಶ್ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿಗಳಾದ ಹರೀಶ್ ಹಾಗೂ ಅನುಷಾ ಎಂಬ ದಂಪತಿಯನ್ನು ಬಂಧಿಸಿದ್ದಾರೆ.

ಘಟನೆಯ ವಿವರ
ಹರೀಶ್ ಮತ್ತು ಅನುಷಾ ಎಂಬಿಬ್ಬರು ದಂಪತಿಗಳು ಬೆಂಗಳೂರಿನಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಆಗಿದ್ದು ಕೆಲಸ ನಿರ್ವಹಿಸುತ್ತಿದ್ದರು. ಆದರೆ ಹೆಚ್ಚಿನ ಹಣಗಳಿಸಬೇಕು ಎಂಬ ಉದ್ದೇಶದಿಂದ ಶಿವಮೊಗ್ಗದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದು, ಅಲ್ಲಿಂದಲೇ ಕನ್ನಡ ಲೈಟ್ ಎಂಬ ಯೂಟ್ಯೂಬ್ ಚಾನೆಲ್ ಒಂದನ್ನು ತಯಾರಿಸಿ ಅ ಮೂಲಕ ವಿಡಿಯೋ ಗಳನ್ನು ವೈಭವೀಕರಿಸಿ ಅಪ್ ಲೋಡ್ ಮಾಡಿಕೊಳ್ಳುತ್ತಿದ್ದರು.

ಸಮಾಜದಲ್ಲಿ ನಡೆಯುವ ಘಟನೆಗಳಿಗೆ ಸಂಬಂಧಿಸಿದಂತೆ ವಿಡಿಯೋ ಗಳನ್ನು ತಯಾರಿಸಿ ಇವರೇ ಅಪ್ ಲೋಡ್ ಮಾಡುತ್ತಿದ್ದರು. ಇತ್ತೀಚಿಗೆ ಬೇರೆ ರಾಜ್ಯವೊಂದರಲ್ಲಿ ಜ್ಯೋತಿಷಿಯೋರ್ವನ ವಿಚಾರವೊಂದರ ಘಟನೆಗೆ ಸಂಬಂಧಿಸಿದಂತೆ ಬಂದಿರುವ ವರದಿಗೆ ಇವರೇ ವಿಡಿಯೋ ತಯಾರಿಸಿ ಬಳಿಕ ಬಂಟ್ವಾಳ ಮೂಲದ ಯುವತಿಯ ಪೋಟೋ ಒಂದನ್ನು ಅದರ ಜೊತೆ ದುರ್ಬಳಕೆ ಮಾಡಿಕೊಂಡು ಅತೀ ಹೆಚ್ಚು ಜನರ ಗಮನ ಸೆಳದು ಅ ಮೂಲಕ ಹಣ ಗಳಿಸುವುದಕ್ಕಾಗಿ ವಿಡಿಯೋ ಮಾಡಿ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದಾರೆ.

ಅ ಘಟನೆಗೂ ಇಲ್ಲಿನ ಯುವತಿಗೂ ಯಾವುದೇ ಸಂಬಂಧವಿಲ್ಲದ ಕಾರಣ ಇವರ ಮೇಲೆ ಕಾನೂನು ಕ್ರಮಕ್ಕೆ ದೂರು ನೀಡಲಾಗಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ಬೆನ್ನು ಹತ್ತಿದ ಬಂಟ್ವಾಳ ನಗರ ಪೋಲೀಸರು ಶಿವಮೊಗ್ಗದಲ್ಲಿ ಕಾರ್ಯಚರಿಸುತ್ತಿದ್ದ ಇವರಿಬ್ಬರನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು