News Karnataka Kannada
Monday, May 06 2024
ಮಂಗಳೂರು

ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

Ravi
Photo Credit :

ಮ0ಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್- 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟು ಮಂದಿಗೆ ಉದ್ಯೋಗ, ಬಡವರಿಗೆ ನೆರವು ನೀಡುತ್ತಿರುವ ಸಮಾಜಸೇವಕ ರವಿ ಕಕ್ಯಪದವು ಆಯ್ಕೆಯಾಗಿದ್ದಾರೆ.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಕಾರ್ಯಕಾರಿ ಸಮಿತಿ ಸದಸ್ಯ, ಸಮಾಜ ಸೇವಕ ರವೀಂದ್ರನಾಥ್ ಕೆ. ಹಾಗೂ ಸಹ್ಯಾದ್ರಿ ಎಂಜಿನಿಯರಿAಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಅನಂತ ಪ್ರಭು ನೇತೃತ್ವದ ನಿರ್ಣಾಯಕ ಸಮಿತಿ ಈ ಆಯ್ಕೆ ನಡೆಸಿದೆ.

ಮಾ.6ರಂದು ಪ್ರಶಸ್ತಿ ಪ್ರದಾನ: ಮಾ.6ರಂದು ತಣ್ಣೀಬಾವಿಯ ಟ್ರೀ ಪಾರ್ಕ್ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದು ರವಿ ಕಕ್ಯಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನೊಳಗೊಂಡಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರವಿ ಕಕ್ಯಪದವು ಪರಿಚಯ: ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಮುದಲಾಡಿ ಕುಟುಂಬದ ದಿವಂಗತ ಚಂದು ಪೂಜಾರಿ- ಕಮಲ ದಂಪತಿಯ ಇಬ್ಬರು ಮಕ್ಕಳ ಪೈಕಿ ಹಿರಿಯವರು ರವಿ ಕಕ್ಯಪದವು. ಬಡ ಕುಟುಂಬದಲ್ಲಿ ಹುಟ್ಟಿದ ಅವರಿಗೆ ಆರನೇ ವರ್ಷದಲ್ಲಿ ಶಾಲೆಗೆ ಸೇರಿಸಲಾಗಿತ್ತುö. ಕಟ್ಟಿಗೆ ಒಡೆಯುವ ಕಾಯಕ ಮಾಡುತ್ತಿದ್ದ ತಂದೆಯ ಕಾಲಿಗೆ ಕೊಡಲಿ ಪೆಟ್ಟು ಬಿದ್ದುö, ಗಂಭೀರ ಗಾಯವಾದ ದಿನವೇ ಶಾಲೆ ಬಿಟ್ಟಿದ್ದಾರೆ. ಕೇವಲ 15 ದಿನ ಶಾಲೆಯ ಮೆಟ್ಟಿಲು ಹತ್ತಿದ್ದು, ಅವರಿಗೆ ಅಕ್ಷರ ಜ್ಞಾನವಿಲ್ಲ.
ಕುಟುಂಬವನ್ನು ಸಾಗಿಸುವ ಜವಾಬ್ದಾರಿಯಿಂದ ಬಾಲ್ಯದಲ್ಲೇ ದುಡಿಮೆ ಆರಂಭಿಸಿದ ಅವರು, ಧರ್ಮಸ್ಥಳದಲ್ಲಿ ಪತ್ರಿಕಾ ವಿತರಕರಾಗಿದ್ದರು. ಅಂಗಡಿಯಲ್ಲಿ ಸಹಾಯಕರಾಗಿದ್ದರು. ಮುಂಬಯಿಯಲ್ಲಿ ಹೋಟೆಲ್ ಕ್ಲೀನರ್ ಆಗಿದ್ದರು. ಮೇಸ್ತಿçಗೆ ಹೆಲ್ಪರ್ ಆಗಿದ್ದರು. ಹೋಟೆಲ್‌ನಲ್ಲಿ ಸಹಾಯಕರಾಗಿದ್ದರು. ಅರ್ಚಕರ ಸಹಾಯಕನಾಗಿಯೂ ಕೆಲಸ ಮಾಡಿದ್ದರು.
2000 ಇಸವಿಗೆ ಸುಬ್ರಹ್ಮಣ್ಯಕ್ಕೆ ಬಂದ ಅವರು, ಪೈಂಟರ್, ಸಾರಣೆ ಕೆಲಸಗಾರನಾಗಿ ದುಡಿದು ಬಳಿಕ ಗುತ್ತಿಗೆದಾರನಾದರು. ಬಳಿಕ ಸ್ವಂತ ಅನುಗ್ರಹ ಕನ್‌ಸ್ಟçಕ್ಷನ್, ಏನೆಕಲ್‌ನಲ್ಲಿ ಅಮೃತ ಅನುಗ್ರಹ ಇಂಡಸ್ಟಿçÃಸ್ ಸ್ಥಾಪಿಸಿ, ಯಶಸ್ವಿ ಮತ್ತು ಬೇಡಿಕೆಯ ಗುತ್ತಿಗೆದಾರನಾಗಿದ್ದಾರೆ. ಇಷ್ಟರ ತನಕ 265ಕ್ಕೂ ಹೆಚ್ಚು ಮನೆಗಳನ್ನು ಹಾಗೂ ಐದು ಅಪಾರ್ಟ್ಮೆಂಟ್‌ಗಳನ್ನು ನಿರ್ಮಿಸಿದ ಹಿರಿಮೆ ಅವರದ್ದು. ಇಂದು ಸುಮಾರು 300 ಮಂದಿಗೆ ನೇರ ಉದ್ಯೋಗ ಒದಗಿಸಿದ್ದಾರೆ.

ಸಮಾಜಸೇವೆ: ಸಮಾಜಸೇವೆಯು ರವಿ ಕಕ್ಯಪದವು ಅವರ ಇಷ್ಟದ ಪ್ರವೃತ್ತಿö. ತನ್ನ ದುಡಿಮೆಯ ಉಳಿತಾಯದ ಶೇ.25 ಭಾಗವನ್ನು ಸಮಾಜಸೇವಗೆ ವ್ಯಯ ಮಾಡುತ್ತಿದ್ದಾರೆ. ಪ್ರತಿವರ್ಷ ನೂರಾರು ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತç ನೀಡುತ್ತಿದ್ದಾರೆ. ಕುಲ್ಕುಂದ ಗ್ರಾಮದಲ್ಲಿ 80 ಸೆಂಟ್ಸ್ ಜಾಗವನ್ನು ಖರೀದಿಸಿ, ಅದನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಅದರಲ್ಲಿ ಅರ್ಹ ವ್ಯಕ್ತಿಗಳಿಗೆ ಮನೆಗಳನ್ನೂ ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದಾರೆ. ಪ್ರತಿವರ್ಷ ಷಷ್ಠಿ ಸಂದರ್ಭದಲ್ಲಿ ಬಡವರಿಗೆ ಅಕ್ಕಿಯನ್ನು ದಾನ ಮಾಡುತ್ತಿದ್ದಾರೆ.

ಸಮಾಜಸೇವೆಗಾಗಿ ಜೇಸಿಐ ಮತ್ತಿತರ ಸಂಘ ಸಂಸ್ಥೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೆಸಿಐನ ವಲಯ ಉಪಾಧ್ಯಕ್ಷö, ವಲಯಾಕಾರಿ ಆಗಿದ್ದರು. ಅವರ ಜೀವನ, ಸಾಧನೆ ಕುರಿತು ದಂತ ವೈದ್ಯೆ ಡಾ.ರಾಜೇಶ್ವರಿ ಗೌತಮ್ ಅವರು `ಬೆಂಕಿಯಲ್ಲಿ ಅರಳಿದ ಹೂವು’ ಎಂಬ ಪುಸ್ತಕ ಬರೆದಿದ್ದಾರೆ.

ರವಿ ಕಕ್ಯಪದವು ಅವರಿಗೆ ಜೆಸಿಐ ಸಾಧನಾಶ್ರೀ, ಕಮಲ ಪತ್ರ ಪ್ರಶಸ್ತಿ, ಸ್ವಸ್ತಿಶ್ರೀ ರಾಜ್ಯ ಪ್ರಶಸ್ತಿ ಇತ್ಯಾದಿಯಲ್ಲದೇ, 270ಕ್ಕೂ ಅಕ ಸನ್ಮಾನಗಳು ಲಭಿಸಿವೆ. ಶೂನ್ಯದಿಂದ ಬಂದು ಸಾಧಕನಾಗಿ ಮೆರೆದ ಅವರ ಜೀವನ ವೃತ್ತಾಂತ ಮತ್ತೊಬ್ಬರಿಗೆ ಪ್ರೇರಣದಾಯಕ. ಬದುಕಿನ ಕಷ್ಟö, ಕಾರ್ಪಣ್ಯö, ಕಲ್ಲು ಮುಳ್ಳುಗಳನ್ನು ದಾಟಿ ಸಾಧನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು