Categories: ಮಂಗಳೂರು

ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ : ಮೂವರ ಬಂಧನ

ಬಂಟ್ವಾಳ : ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಏಪ್ರಿಲ್ 23 ಮಧ್ಯರಾತ್ರಿ ಬಂಟ್ವಾಳ ತಾಲ್ಲೂಕು ಬಿ ಮೂಡ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಿಲ್ಲಿಸಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಯವರಾದ ಅನೂಫ್ ಎಂಬವರ ಬೈಕ್ ಕಳ್ಳತನವಾಗಿತ್ತು ಈ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು .

ಕಳೆದ ಏಪ್ರಿಲ್ ಇಪ್ಪತ್ತ ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬಾ ಗ್ರಾಮದ ಮಣಿಹಳ್ಳ ಎಂಬಲ್ಲಿ ಮುಕೇಶ್ ಎಂಬವರು ಬೈಕನ್ನು ರಸ್ತೆ ಬದಿ ನಿಲ್ಲಿಸಿದರು ಮರುದಿನ ನೋಡುವಾಗ ಸುಮಾರು 1ಲಕ್ಷದ ಮೌಲ್ಯದ ಬೈಕ್ ಕಳ್ಳತನವಾಗಿದೆ .ಈ ಬಗ್ಗೆ ಮುಕೇಶ್ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು .ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು ಬೆಳ್ತಂಗಡಿಯ ಅಬೂಬಕರ್ ಬಂಟ್ವಾಳದ ಅಕ್ಬರ್ ಹಾಗೂ ಬೆಳ್ತಂಗಡಿಯ ಮೊಹಮ್ಮದ್ ಸಮೀರ್ ಎಂಬವರನ್ನು ಬಂಧಿಸಿ ಕಳವು ಗೈದ 2ಬೈಕ್ ಹಾಗೂ ಕೃತ್ಯಕ್ಕೆ ಬಳಸಲಾದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .

ಪೊಲೀಸ್ ಅಧೀಕ್ಷಕರು ದಕ್ಷಿಣ ಜಿಲ್ಲಾ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಜಿಲ್ಲಾ ಮಂಗಳೂರು ರವರ ಮಾರ್ಗದರ್ಶನದಂತೆ ಮಾನ್ಯ ಸಹಾಯಕ ಪೊಲೀಸ್ ಅಧೀಕ್ಷಕರು ರಜಪೂತ್ ಮತ್ತು ಪೊಲೀಸ್ ನಿರೀಕ್ಷಕರಾದ ವಿವೇಕಾನಂದ ರವರ ನಿರ್ದೇಶನದಂತೆ ಪಿಎಸ್ ಐಗಳಾದ ಅವಿನಾಶ್ ಕಲೈಮಾರ್ ನೇತೃತ್ವದಲ್ಲಿ ವಿಶೇಷ ತಂಡದ ಸಿಬ್ಬಂದಿಯವರಾದ ನಾರಾಯಣ ಇರ್ಶಾದ್ ಗಣೇಶ್ ಮನೋಹರ್ ಪ್ರವೀಣ್ ಮೋಹನ್ ನಾಗರಾಜ್ ಹಾಗೂ ಕಂಪ್ಯೂಟರ್ ವಿಭಾಗದ ಸಿಬ್ಬಂದಿಯವರಾದ ಸಂಪತ್ ಮತ್ತು ದಿವಾಕರರವರು ಪತ್ತೆಕಾರ್ಯದಲ್ಲಿ ಭಾಗವಹಿಸಿರುತ್ತಾರೆ

Ashika S

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

11 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

21 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

53 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago