Categories: ಮಂಗಳೂರು

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮೇ 30 ವಿಟ್ಲದಲ್ಲಿ ಪ್ರತಿಭಟನೆ

ಬಂಟ್ವಾಳ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಸಾವಿಗೆ ಕಾರಣನಾದ ಆರೋಪಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಮೇ 30ರ ಸೋಮವಾರ ವಿಟ್ಲದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು.

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರು ಈ ಘಟನೆ ಬಗ್ಗೆ ದಲಿತ್ ಸೇವಾ ಸಮಿತಿ ವಿರುದ್ಧ ಸುಳ್ಳು ಆರೋಪ ಮಾಡಿರುವುದು ಖಂಡನೀಯವಾಗಿದ್ದು, ಅವರ ಹೇಳಿಕೆಯನ್ನು ಖಂಡಿಸುತ್ತೇವೆ.

ದಲಿತ್ ಸಮುದಾಯದವರ ಮೇಲೆ ದೌರ್ಜನ್ಯ ನಡೆದಾಗ ದಲಿತ್ ಸೇವಾ ಸಮಿತಿ ಕೈಕಟ್ಟಿ ಕುಳಿತುಕೊಂಡಿಲ್ಲ. ಅದರ ವಿರುದ್ಧ ಕಾನೂನು ಹೋರಾಟ ಮಾಡಿದ್ದು, ಈ ಬಾಲಕಿ ಮೃತಪಟ್ಟ ತಕ್ಷಣವೇ ವಿಟ್ಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ.

ನಮ್ಮ ಜಿಲ್ಲೆಯಲ್ಲಿ ಈ ಹಿಂದೆ ದಲಿತ್ ಸಮುದಾಯದವರ ಮೇಲೆ ಹಲವು ಅತ್ಯಾಚಾರ, ಕೊಲೆ ಪ್ರಕರಣಗಳು ನಡೆದಿದ್ದರೂ ಹಿಂದು ಸಂಘಟನೆಗಳು ಯಾವುದೇ ಪ್ರತಿಭಟನೆ ನಡೆಸಿಲ್ಲ. ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದ ದಿನೇಶ್ ಹತ್ಯೆ ಪ್ರಕರಣ, ಪುತ್ತೂರಿನ ಸೊರಕೆಯಲ್ಲಿ ಮುಗೇರ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಕೊಳ್ನಾಡು ಗ್ರಾಮದಲ್ಲಿ ಮಾನಭಂಗಕ್ಕೆ ಯತ್ನ, ಸಂಪ್ಯದಲ್ಲಿ ಅಪ್ರಾಪ್ತ ಬಾಲಕಿಗೆ ಗರ್ಭದಾನ ಪ್ರಕರಣ,  ಇದೇ ರೀತಿಯ ಹಲವು ಘಟನೆಗಳು ನಡೆದಾಗ ಹಿಂದೂ ಸಂಘಟನೆಗಳು ಮೌನವಾಗಿದ್ದು, ದಲಿತ್ ಸೇವಾ ಸಮಿತಿ ಇದರ ವಿರುದ್ಧ ಹೋರಾಟ ನಡೆಸಿದೆ ಎಂದರು.

ಆರೋಪಿ ಸಾಹುಲ್ ಹಮೀದ್ ಎಂಬಾತನ ಕಿರುಕುಳದಿಂದ ಬಾಲಕಿ ಸಾವಿಗೆ ಶರಣಾಗಿದ್ದು, ಬಾಲಕಿ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರ ಸರಕಾರ ನೀಡಬೇಕು. ಆರೋಪಿ ಸಾಹುಲ್ ಹಮೀದ್ ಎಂಬಾತನನ್ನು ಗಲ್ಲು ಶಿಕ್ಷೆಗೊಳಪಡಿಸಬೇಕು ಮತ್ತು ರಾಜ್ಯಾದ್ಯಂತ ನಡೆದ ದಲಿತರ ಮೇಲಿನ ಅತ್ಯಾಚಾರ, ದೌರ್ಜನ್ಯ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಮೇ 30ರಂದು ಬೆಳಿಗ್ಗೆ ವಿಟ್ಲ ಜೈನ ಬಸದಿ ಬಳಿಯಿಂದ ಮೆರವಣಿಗೆ ಹೊರಟು ನಾಡಕಚೇರಿಯಲ್ಲಿ ಉಪತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಯು, ಮಹಿಳಾ ಘಟಕದ ಉಪಾಧ್ಯಕ್ಷೆ ವಿಮಲ ಮುಳಿಯ, ಸಂಚಾಲಕಿ ವಿಮಲ ಸೀಗೆಬಲ್ಲೆ, ಶ್ರೀದೇವಿ, ಗೋಪಾಲ ನೇರಳಕಟ್ಟೆ, ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.

Sneha Gowda

Recent Posts

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

3 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

22 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

23 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

27 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

37 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

43 mins ago