Categories: ಮಂಗಳೂರು

ರಾಜ್ಯದ ಎಲ್ಲಾ 2,500 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ : ಡಾ. ಕೆ ಸುಧಾಕರ್

ಪುತ್ತೂರು :  ಆರೋಗ್ಯ ರಕ್ಷಣೆಯ ಕುರಿತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಆದ್ಯತಾ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು  ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ರಾಜ್ಯದ ಎಲ್ಲಾ 2,500 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಹೇಳಿದರು.

ಬುಧವಾರ ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿಷ್ಠಿತ ಬಹುರಾಜ್ಯ ಸಹಕಾರ ಸಂಸ್ಥೆ ಕ್ಯಾಂಪ್ಕೋ ವತಿಯಿಂದ ರು. 1ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳಿಸಲಾದ ಆಕ್ಸಿಜನ್‌ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ವೀಡಿಯೋ ಸಂವಾದದ ಮೂಲಕ ಅವರು ಮಾತನಾಡಿದರು.

ತುರ್ತು ಕಾರ್ಯನಿಮಿತ್ತ ಆರೋಗ್ಯ ಸಚಿವರು ಸ್ವತಃ ಹಾಜರಾಗಲು ಅಸಾಧ್ಯವಾಗಿತ್ತು. ಕೊರೋನಾ 2ನೇ ಅಲೆಯ ಸಂದರ್ಭ ಉಂಟಾದ ಆಕ್ಸಿಜನ್‌  ಕೊರತೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರವು  ಹಾಕಿಕೊಟ್ಟಮಾರ್ಗಸೂಚಿಯಂತೆ ರಾಜ್ಯದಲ್ಲಿ ಈಗ 250ಕ್ಕೂ ಹೆಚ್ಚು ಆಮ್ಲಜನಕ ಉತ್ಪಾದನಾ ಘಟಕಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಇವೆ. ಈ ಪೈಕಿ ಶೇ.50ರಷ್ಟು ಘಟಕಗಳು ಖಾಸಗಿಯವರ ನೆರವಿನಿಂದ ನಿರ್ಮಾಣವಾಗಿವೆ. ರಾಜ್ಯದಲ್ಲಿ ಈಗ 13,588 ಆಕ್ಸಿಜನ್‌ ಸಿಲಿಂಡರ್‌ಗಳಿವೆ. ಆಕ್ಸಿಜನ್‌ ಉತ್ಪಾದನೆಯ ಪ್ರಮಾಣ 1,700 ಮೆಟ್ರಿಕ್‌ ಟನ್‌ಗೆ ತಲುಪಿದೆ. ಇದೀಗ ಆಕ್ಸಿಜನ್‌ ಕುರಿತಂತೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲಾಗಿದೆ ಎಂದರು.

Raksha Deshpande

Recent Posts

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

4 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

6 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

27 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

41 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

57 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

1 hour ago