News Karnataka Kannada
Saturday, May 04 2024
ಮಂಗಳೂರು

ರಾಜ್ಯದ 3100 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Wheel Chair
Photo Credit : News Kannada

ಬೆಳ್ತಂಗಡಿ: ವಿಶೇಷ ಚೇತನರಿಗೆತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ಸಲಕರಣೆಗಳನ್ನು ನೀಡಲಾಗುತ್ತದೆ. ಇದರಂತೆ ಪ್ರಸ್ತುತ ವರ್ಷ 3100 ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಗಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಹೆಚ್. ಮಂಜುನಾಥರವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 10.41 ಲಕ್ಷ ವಿಶೇಷ ಚೇತನರಿದ್ದಾರೆಯೆಂಬ ಮಾಹಿತಿಯಿದೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವಿಕಲತೆ ಸಮಸ್ಯೆಗಳು ಬಂದರೆ ಇನ್ನು ಕೆಲವರಿಗೆ ದುರದೃಷ್ಟವಶಾತ್‌ ಅಪಘಾತಗಳು, ಮಾರಕ ರೋಗಗಳಿಂದ ಬರುತ್ತವೆ. ಗಂಭೀರ ಸಮಸ್ಯೆಯಿರುವ ವಿಶೇಷ ಚೇತನರ ಪಾಲನೆ ಪೋಷಣೆ, ಅತ್ಯಂತ ಕಷ್ಟಕರವಾದುದು. ಇವರ ಯೋಗ ಕ್ಷೇಮ ನೋಡುವುದಕ್ಕಾಗಿಯೇ ಮನೆಯಲ್ಲಿ ಒಂದೆರಡು ಮಂದಿ ಇರಬೇಕಾಗಿದೆ.

ಮುಖ್ಯವಾಗಿ ಸ್ನಾನ, ಶೌಚ ಊಟೋಪಚಾರಗಳನ್ನು ಸ್ವಯಂ ಮಾಡಿಕೊಳ್ಳಲು ಸಾಧ್ಯವಾಗದ, ಎಷ್ಟೋಮಂದಿ ಇತರರ ಅವಲಂಬನೆಯಲ್ಲಿ ಬದುಕಬೇಕಿದೆ. ಮನೆಯಿಂದ ಹೊರಹೋಗಲಾರದೆ, ಮಲಗಿದಲ್ಲೇ ಇರುವ ವಿಶೇಷ ಚೇತನರ ಬದುಕಂತೂ ಅತ್ಯಂತ ಶೋಚನೀಯವಾಗಿರುತ್ತದೆ. ನಿತ್ಯ ಕೂಲಿ ಮಾಡಿ ಬದುಕುವ ಎಷ್ಟೋ ಕುಟುಂಬಗಳು ಇದರಿಂದಾಗಿ ಆರ್ಥಿಕ ಸಂಕಷ್ಟವನ್ನೆದುರಿಸುವುದಲ್ಲದೇ ಮಾನಸಿಕವಾಗಿಯೂ ನೊಂದಿರುತ್ತಾರೆ. ಇದನ್ನರಿತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಇವರಿಗಾಗಿಯೇ ವಿವಿಧ ಉಚಿತ ಸಲಕರಣೆಗಳನ್ನು ನೀಡುವ ‘ಜನಮಂಗಲ’ ಕಾರ್ಯಕ್ರಮ ಜಾರಿಗೆ ತಂದರು.

ಜನಮಂಗಲ ಕಾರ್ಯಕ್ರಮದಂತೆ ಹಾಸಿಗೆ ಹಿಡಿದು ಮಲಗಿದಲ್ಲಿಯೇ ಇದ್ದವರಿಗೆ ಹುಣ್ಣು (ಬೆಡ್ ಸೋರ್) ಆಗದಂತೆ ನೀರ ಹಾಸಿಗೆ (ವಾಟರ್ ಬೆಡ್), ಅಪಘಾತಕ್ಕೊಳಗಾಗಿ ನಡೆದಾಡಲು ಸಾಧ್ಯವಿಲ್ಲದವರಿಗೆ ಓಡಾಡಲುಗಾಲಿ ಕುರ್ಚಿ (ವೀಲ್‌ಚಯರ್), ಏಕಕಾಲಿನ ಕೈಗೋಲು (ಸಿಂಗಲ್ ಲೆಗ್ ವಾಕಿಂಗ್ ಸ್ಟಿಕ್), ಮೂರುಕಾಲಿನ ಕೈಗೋಲು (ತ್ರಿ ಲೆಗ್ ವಾಕಿಂಗ್ ಸ್ಟಿಕ್), ಹಾಸಿಗೆ ಹಿಡಿದ ರೋಗಿಗಳಿಗೆ ಸ್ನಾನಕ್ಕೆ, ಶೌಚಕ್ಕೆ ಹೋಗಲು ಗಾಲಿಕುರ್ಚಿ(ಕಮೋಡ್‌ವೀಲ್‌ಚಯರ್),ಅಪಘಾತಕ್ಕೊಳಗಾದವರಿಗೆ ಊರುಗೋಲು (ಆಕ್ಸಿಲರಿಕ್ರಚಸ್), ಪ್ಯಾರಾಲಿಸಿಸ್ ಗೆ ತುತ್ತಾದವರಿಗೆ ನಡುಗೋಲು ವಿತರಿಸಲಾಗುತ್ತಿದೆ.

ಈ ಎಲ್ಲಾ ಸಲಕರಣೆಗಳನ್ನು ಉಚಿತವಾಗಿ ನೀಡುತ್ತಿದ್ದು, ವಿಶೇಷ ಚೇತನರ ಮನೆಬಾಗಿಲಿಗೇ ತಲುಪಿಸಲಾಗುತ್ತಿದೆಯಲ್ಲದೇ ಸಲಕರಣೆಗಳ ಬಳಕೆಯ ಕುರಿತಂತೆ ಸಂಸ್ಥೆಯಕಾರ್ಯಕರ್ತರು ವಿವರಿಸಿ ಮಾಹಿತಿ ನೀಡುತ್ತಾರೆ.

ಪ್ರಸ್ತುತ ವರ್ಷವು ಸುಮಾರು 3100 ಸಲಕರಣೆಗಳನ್ನು ವಿತರಿಸಿದ್ದು,ಇದುವರೆಗೆ ಯೋಜನೆಯಿಂದ ಒಟ್ಟು 13,200 ಸಲಕರಣೆಗಳನ್ನು ಉಚಿತವಾಗಿ ವಿತರಿಸಲಾಗಿದೆ. ಈ ಸಲಕರಣೆಗಳಿಂದಾಗಿ ವಿಶೇಷ ಚೇತನರ ದೈನಂದಿನ ಬದುಕಿನಲ್ಲಿ ಕನಿಷ್ಠ ಸಹಾಯವಾದರೂ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಲು ಸಾಧ್ಯವಾಗಬಹುದೆಂಬುದು ನಮ್ಮ ನಂಬಿಕೆಯಾಗಿದೆಯೆಂದು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ|ಎಲ್. ಹೆಚ್. ಮಂಜುನಾಥ್‌ರವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು