News Karnataka Kannada
Tuesday, April 30 2024
ಮಂಗಳೂರು

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ನಾರಾಯಣ ಆಚಾರ್ಯ ನಿಧನ

Bltngdy
Photo Credit :

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ, ಯಕ್ಷಗಾನ ಹಾಗೂ ನಾಟಕ ಕ್ಷೇತ್ರದ ಹಿರಿಯ ಕಲಾವಿದ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ನಾರಾಯಣ ಆಚಾರ್ಯ ಗೇರುಕಟ್ಟೆ (82) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು.

ಅವರು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ. ಜನ ಸಂಘದ ಹಿರಿಯ ಕಾರ್ಯಕರ್ತರಾಗಿದ್ದ ಅವರು ಮಂಡಲ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಯಕ್ಷಗಾನ ಹಾಗೂ ನಾಟಕ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರು. ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಹ ಮೊಕ್ತೇಸರರಾಗಿ, ನಾಳ ಕ್ಷೇತ್ರದ ಭಜನಾ ಮಂಡಳಿಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸ್ಥಾಪಕ ಸದಸ್ಯರಾಗಿ, ಪದಾಧಿಕಾರಿಯಾಗಿ, ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಪದಾಧಿಕಾರಿಯಾಗಿ, ವಿಶ್ವಕರ್ಮ ಸಮುದಾಯದ ಮುಂದಾಳು ಆಗಿಯೂ ಸೇವೆ ಸಲ್ಲಿಸಿದ್ದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಸಂಘಸಂಸ್ಥೆಗಳಿಂದ ಸನ್ಮಾನವನ್ನು ಪಡೆದಿದ್ದರು. ಮೃತರು ಪತ್ನಿ, ಮೂರು ಮಂದಿ ಗಂಡು, ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಮನೆಗೆ ವಿವಿಧ ಸಂಘದ- ಸಂಸ್ಥೆಯ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು