Categories: ಮಂಗಳೂರು

ರೈತ ಕಾರ್ಮಿಕರ ಸಖ್ಯತೆಯಿಂದ ಮಾತ್ರವೇ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ – ಸುನಿಲ್ ಕುಮಾರ್ ಬಜಾಲ್

ಮಂಗಳೂರು: ದೇಶವನ್ನಾಳುವ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಅನ್ನದಾತರು ತೀವ್ರ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಕೃಷಿ ರಂಗವೇ ದಿವಾಳಿ ಎದ್ದಿದ್ದು ಲಕ್ಷಾಂತರ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೊಂದು ಕಡೆ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವರ್ಗದ ಬದುಕನ್ನೇ ನಾಶ ಮಾಡಲಾಗುತ್ತಿದೆ.
ಆಳುವ ವರ್ಗಗಳು ಪ್ರಜ್ಞಾಪೂರ್ವಕವಾಗಿಯೇ ರೈತ ಕಾರ್ಮಿಕರ ಮೇಲೆ ತನ್ನ ದಾಳಿಗಳನ್ನು ಹೆಚ್ಚಿಸಿ ಸಂಘಟಿತರಾಗದಂತೆ ಕುತಂತ್ರ ನಡೆಸುತ್ತಿದೆ. ಈ ಮೂಲಕ ಮತ್ತೆ ದೇಶವನ್ನು ಕಾರ್ಪೊರೇಟ್ ಕಂಪೆನಿಗಳ ಹಿಡಿತಕ್ಕೆ ಒಪ್ಪಿಸಲು ಸಜ್ಜಾಗಿದೆ.
ಈ ನಿಟ್ಟಿನಲ್ಲಿ ಇಡೀ ದೇಶಕ್ಕೆ ಅನ್ನ ನೀಡುವ ರೈತ ಹಾಗೂ ಸಮಾಜದಲ್ಲಿ ಸಂಪತ್ತನ್ನು ಸೃಷ್ಠಿಸುವ ಕಾರ್ಮಿಕ ಒಂದಾದರೆ ಮಾತ್ರವೇ ಆಳುವ ವರ್ಗದ ನೀತಿಗಳನ್ನು ಹಿಮ್ಮೆಟ್ಟಿಸುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಹೇಳಿದರು.
ದೇಶದಲ್ಲಿ ನಡೆದ ಪ್ರಪ್ರಥಮ ರೈತ ಕಾರ್ಮಿಕರ ಸಖ್ಯತೆಯ ಮಹಾಮುಷ್ಕರದ 40ನೇ ವರ್ಷಾಚರಣೆಯ ಸಂದರ್ಭದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ,ಈ ಮಾತುಗಳನ್ನು ಹೇಳಿದರು.
ಮುಂದುವರಿಸುತ್ತಾ ಅವರು,1982ರಲ್ಲಿ ನಡೆದ ಮುಷ್ಕರವು ನೀಡಿದ ಗಂಭೀರ ಹೊಡೆತಕ್ಕೆ ತತ್ತರಿಸಿದ ಅಂದಿನ ಆಳುವ ವರ್ಗವು ಲಾಠೀಚಾರ್ಜ್, ಗೋಲಿಬಾರ್ ನಂತಹ ಅಮಾನುಷ ಕೃತ್ಯ ನಡೆಸಿದ್ದರ ಪರಿಣಾಮವಾಗಿ 10 ಅಮೂಲ್ಯ ಜೀವಗಳು ಬಲಿಯಾಗಿ ಸಾವಿರಾರು ಮಂದಿ ಗಾಯಗೊಂಡಿದ್ದರು‌ ಎಂದು ಹೇಳಿದರು
ಪ್ರಾಸ್ತಾವಿಕವಾಗಿ ಮಾತನಾಡಿದ CITU ಮಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ರವರು,40 ವರ್ಷಗಳ ಹಿಂದೆ ಮೊಳಗಿದ ರೈತ ಕಾರ್ಮಿಕರ ಸಖ್ಯತೆಯ ಘೋಷಣೆಯು ಕಳೆದ ಒಂದು ವರ್ಷಗಳಿಂದ ರೈತರು ನಡೆಸಿದ ಚಾರಿತ್ರಿಕ ಹೋರಾಟದಲ್ಲಿ ಮರುಕಳಿಸಿ ಚರಿತ್ರೆಯಲ್ಲಿ ಮೈಲುಗಲ್ಲಾಗಿ ಪರಿಣಮಿಸಿದೆ.
ಫೆಬ್ರವರಿ 23, 24ರಂದು ನಡೆಯಲಿರುವ ಅಖಿಲ ಭಾರತ ಮಹಾಮುಷ್ಕರವನ್ನು ಯಶಸ್ವಿ ಗೊಳಿಸುವ ಮೂಲಕ ಕಾರ್ಪೊರೇಟ್ ಕಂಪೆನಿಗಳ ಅಧಿಪತ್ಯಕ್ಕೆ ಸಡ್ಡುಹೊಡೆಯಬೇಕಾಗಿದೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ CITU ಮಂಗಳೂರು ನಗರಾಧ್ಯಕ್ಷರಾದ ರವಿಚಂದ್ರ ಕೊಂಚಾಡಿಯವರು ಮಾತನಾಡುತ್ತಾ 90ರ ದಶಕದಿಂದ ಜಾರಿಗೊಂಡ ಜಾಗತೀಕರಣ ಉದಾರೀಕರಣ ಖಾಸಗೀಕರಣಗಳ ನೀತಿಗಳಿಂದ ದೇಶದ ಸಾರ್ವಜನಿಕ ಉದ್ದಿಮೆಗಳು ಭಾರೀ ಸಂಕಷ್ಟದಿಂದ ಕೂಡಿದ್ದು ಮಾತ್ರವಲ್ಲದೆ ಕಾರ್ಮಿಕ ವರ್ಗವೂ ಉದ್ಯೋಗ ನಷ್ಟದಿಂದ ಸವಲತ್ತುಗಳಿಂದ ವಂಚಿತಗೊಂಡಿದೆ ಎಂದು ಹೇಳಿದರು.
ಕಾರ್ಯಕ್ರಮ ದಲ್ಲಿ CITU ಮಂಗಳೂರು ನಗರ ಮುಖಂಡರಾದ ಬಾಬು ದೇವಾಡಿಗ,ಭಾರತಿ ಬೋಳಾರ, ಜಯಂತಿ ಶೆಟ್ಟಿ, ಅಶೋಕ್ ಶ್ರೀಯಾನ್, ಲೋಕೇಶ್ ಎಂ, ನೌಷಾದ್, ವಿಲ್ಲಿ‌ವಿಲ್ಸನ್, ಹರೀಶ್ ಕೆರೆಬೈಲ್, DYFI ನಾಯಕರಾದ ಬಿ.ಕೆ.ಇಮ್ತಿಯಾಜ್, ಸಂತೋಷ್ ಬಜಾಲ್, ಪ್ರಗತಿಪರ ಚಿಂತಕರಾದ ಡಾ.ಕ್ರಷ್ಣಪ್ಪ ಕೊಂಚಾಡಿ ಸೇರಿದಂತೆ ವಿವಿಧ ವಿಭಾಗದ ಕಾರ್ಮಿಕರು ಭಾಗವಹಿಸಿದ್ದರು.
Sneha Gowda

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

6 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

6 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

6 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

7 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

7 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

7 hours ago