Categories: ಮಂಗಳೂರು

ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು: ವಿಟ್ಲ ಕನ್ಯಾನದಲ್ಲಿ ಬಾಲಕಿಯ ಸಾವಿಗೆ ಕಾರಣನಾದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮತ್ತು ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಿ, ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ನೀಡಿದ ಕರೆಯಂತೆ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಎಬಿವಿಪಿ, ಮಾತೃಶಕ್ತಿ, ದುರ್ಗಾವಾಹಿನಿ ನೇತೃತ್ವದಲ್ಲಿ ನಗರದ ಮಲ್ಲಿಕಟ್ಟೆ ವೃತ್ತದ ಬಳಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಾನಂದ ಮೆಂಡನ್ ಮಾತನಾಡಿ, ಮೃತಪಟ್ಟ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಿಕಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಸಂಶಯವಿದ್ದು, ಕೂಲಂಕಷ ತನಿಖೆಯಾಗಬೇಕು. ಅಮಾಯಕ ಬಾಲಕಿಯ ಸಾವಿಗೆ ಕಾರಣನಾದ ಆರೋಪಿ ಹಮೀದ್‌ಗೆ ಗಲ್ಲು ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಇದೊಂದು ಲವ್‌ಜಿಹಾದ್ ಹತ್ಯೆಯಾಗಿದ್ದು, ಸಮಾಜ ತಲೆತಗ್ಗಿಸುವಂತಾಗಿದೆ. ಇಂತಹ ಘಟನೆಗಳು ಮುಂದೆ ಮರುಕಳಿಸಬಾರದು. ಪ್ರೀತಿ -ಪ್ರೇಮದ ನಾಟಕವಾಡಿ ಬಾಲಕಿಯನ್ನು ಬಲಿ ಪಡೆದ ಸಾಹುಲ್ ಹಮೀದ್ ಹಿಂದೆ ಇನ್ನೂ ಅನೇಕರು ಇರುವ ಅನುಮಾನವಿದೆ. ಸಮಗ್ರ ತನಿಖೆಯಿಂದ ಸತ್ಯ ಹೊರಬರಲು ಜಿಹಾದಿ ಮಾನಸಿಕತೆ ದೂರವಾಗುವವರೆಗೆ ಹೋರಾಟ ನಡೆಸಲಾಗುವುದು ಎಂದರು.

ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರ ₹ 10 ಲಕ್ಷ ಪರಿಹಾರ ಒದಗಿಸಬೇಕು ಎಂದು ಶಿವಾನಂದ ಮೆಂಡನ್ ವರು ಒತ್ತಾಯಿಸಿದರು.

ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಮಣಿಕಂಠ ಕಳಸ ಮಾತನಾಡಿ, ‘ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ಆರಂಭದಲ್ಲಿಯೇ ಮಟ್ಟ ಹಾಕಬೇಕು. ಕರಾವಳಿಯಲ್ಲಿ ಯುವತಿಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ಹಿಂದೆ ಜಿಹಾದಿಗಳ ವ್ಯವಸ್ಥಿತ ಕೈವಾಡವಿರುವ ಶಂಕೆಯಿದೆ. ಯುವತಿಯರ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಿದೆ’ ಎಂದರು.

ಮಹಾನಗರ ಪಾಲಿಕೆ ಸದಸ್ಯರಾದ ದಿವಾಕರ ಪಾಂಡೇಶ್ವರ, ಕಿರಣ್ ಕುಮಾರ್, ಜಯಲಕ್ಷ್ಮೀ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲ ಕುತ್ತಾರ್, ವಿಭಾಗ ಸಂಚಾಲಕ ಭುಜಂಗ ಕುಲಾಲ್, ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪ್‌ವೆಲ್ ಇದ್ದರು.

Gayathri SG

Recent Posts

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

54 seconds ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

20 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

22 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

36 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

52 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

1 hour ago