Categories: ಮಂಗಳೂರು

ವಕೀಲರ ಭವನದ ಕಾಮಗಾರಿ ಮುಗಿದ್ದಿದ್ದು ಡಿ. 28 ರಂದು ಉದ್ಘಾಟನೆ

ಬೆಳ್ತಂಗಡಿ: 2018ರಲ್ಲಿ ಪ್ರಾರಂಭವಾದ ವಕೀಲರ ಭವನದ ಕಾಮಗಾರಿ ಮುಗಿದ್ದಿದ್ದು ಡಿ. 28 ರಂದು ಉದ್ಘಾಟನೆಗೆ ಸಜ್ಜಾಗಿದೆ. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್.‌ ಅಬ್ದುಲ್‌ ನಜೀರ್‌ ಅವರು ಉದ್ಘಾಟಿಸಲಿದ್ದಾರೆ ಎಂದು ಬೆಳ್ತಂಗಡಿ ಬಾರ್‌ ಅಸೋಸಿಯೇಶನ್‌ ಅಧ್ಯಕ್ಷ ಪ್ರಸಾದ್‌ ಕೆ. ಎಸ್.‌ ಹೇಳಿದರು.

ಅವರು ಮಂಗಳವಾರ ಇಲ್ಲಿನ ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಸರಕಾರದಿಂದ ಮಂಜೂರಾದ ಸುಮಾರು ೨ ಕೋಟಿ ೧೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸಭಾಭವನದ ನೆಲಮಹಡಿಯಲ್ಲಿ ಟೈಪಿಂಗ್‌ ಸೆಕ್ಷನ್‌ ಮತ್ತು ಕ್ಯಾಂಟೀನ್‌ ಇರಲಿದೆ. ಮೊದಲನೆಯ ಮಹಡಿಯಲ್ಲಿ ಪುರುಷ ವಕೀಲರ ಕೊಠಡಿ, ಗ್ರಂಥಾಲಯ, ಅಧ್ಯಕ್ಷರ ಕೊಠಡಿ, ಎರಡನೇ ಮಹಡಿಯಲ್ಲಿ ಸಭಾಂಗಣ, ಮಹಿಳಾ ವಕೀಲರ ಕೊಠಡಿ, ವಕೀಲರ ಸಂಘದ ಪದಾಧಿಕಾರಿಗಳ ಕೊಠಡಿಗಳು ಇರಲಿವೆ. ಸದ್ಯದಲ್ಲೇ ಕಟ್ಟಡದ ಲಿಫ್ಟ್‌ನ ವ್ಯವಸ್ಥೆಗಾಗಿ ಸುಮಾರು ರೂ. ೨೦ ಲಕ್ಷ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅದು ಮಂಜೂರಾತಿಯ ಹಂತದಲ್ಲಿದೆ ಎಂದರು.

ಡಿ. 28 ರಂದು ಸಂಜೆ 5 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮತ್ತು ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಕೆ. ಸೋಮಶೇಖರ ವಹಿಸಲಿದ್ದಾರೆ. ಸಮಾರಂಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧು ಸ್ವಾಮಿ, ಮೀನುಗಾರಿಕೆ ಸಚಿವ ಎಸ್.‌ ಅಂಗಾರ, ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮೊಹಮ್ಮದ್‌ ನವಾಜ್‌, ವಿಶ್ವಜಿತ್‌ ಶೆಟ್ಟಿ, ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಎಂ. ನಟರಾಜ್‌ ಉಪಸ್ಥಿತರಿರಲಿದ್ದಾರೆ.

ವಿಶೇಷ ಅತಿಥಿಗಳಾಗಿ ಸಂಸದ ನಳೀನ್‌ ಕುಮಾರ್‌ ಕಟೀಲು, ಶಾಸಕ ಹರೀಶ ಪೂಂಜ, ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪ ಸಿಂಹ ನಾಯಕ್‌, ಹರೀಶ್‌ ಕುಮಾರ್‌, ಭೋಜೇ ಗೌಡ, ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಲ್.‌ ಶ್ರೀನಿವಾಸ ಬಾಬು, ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಪಿ.ಪಿ.ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಶೈಲೇಶ್‌ ಠೋಸರ್‌, ಪ್ರಚಾರ ಸಮಿತಿಯ ಶಶಿಕಿರಣ್‌ ಜೈನ್‌, ಎನ್.‌ ಅಜಿತ್‌, ಮನೋಹರ ಕುಮಾರ್‌ ಎ., ಹಿರಿಯ ವಕೀಲರಾದ ಶಿವಯ್ಯ, ಪ್ರಮೋದ್‌ ನಾಯಕ್‌ ಮತ್ತಿತರರು ಉಪಸ್ಥಿತರಿದ್ದರು.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

57 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 hour ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago