ಮಂಗಳೂರು

ವಿಟ್ಲ-ಉಪಿನಂಗಡಿ ಬ್ಲಾಕ್ ವ್ಯಾಪ್ತಿಯಲ್ಲಿ ಮೇ6 ರಂದು ಕ್ಷೇತ್ರವಾರು ಸಭೆ

ಮಂಗಳೂರು: ಶ್ರೀ ಮಂಜುನಾಥ ಭಂಡಾರಿಯವರು, ವಿಧಾನ ಪರಿಷತ್ ಸದಸ್ಯರು ವಿಟ್ಲ-ಉಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ಜಿಲ್ಲಾ ಪಂಚಾಯತಿ ವ್ಯಾಪ್ತಿಗಳಲ್ಲಿ ಬರುವ ಗ್ರಾಮ ಪಂಚಾಯತಿ ಮಟ್ಟದಲ್ಲಿ ದಿನಾಂಕ 06-05-2022 ರಂದು ಪಕ್ಷದ ಚುನಾಯಿತರಾದ ಹಾಗೂ ಸ್ಪರ್ಧಿಸಿದ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತಿ ಸದಸ್ಯರು, ಪ್ರಮುಖ ನಾಯಕರು, ಕಾರ್ಯಕರ್ತರ ಜೊತೆ ಕ್ಷೇತ್ರವಾರು ಸಭೆಯನ್ನು ಹಮ್ಮಿಕೊಂಡಿರುತ್ತಾರೆ.

ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಕೆ. ಹರೀಶ್ ಕುಮಾರ್‌, ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿಯಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು, ರಾಜೀವ್‌ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕರಾದ ಶ್ರೀ ಸುಭಾಷ್ ಚಂದ್ರ ಶೆಟ್ಟಿ ಕೊಲ್ನಾಡು ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ ರವರು ಭಾಗವಹಿಸಲಿದ್ದಾರೆ.

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ವ್ಯಾಪ್ತಿಯ ಆಯಾ ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್‌ನ ಚುನಾಯಿತ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಎಲ್ಲಾ ಮಾಜಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಸದಸ್ಯರು, ವಲಯ ಅಧ್ಯಕ್ಷರುಗಳು, ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

20 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

42 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

54 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago