ಬಂಟ್ವಾಳ: ಬಸ್ಸು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.
ಬೈಕ್ನಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಧರ್ಣಪ್ಪ ಗೌಡ ಅವರು ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಧರ್ಣಪ್ಪ ಗೌಡ ಅವರು ಅನಂತಾಡಿ ನಿವಾಸಿಯಾಗಿದ್ದು, ಎಂದಿನಂತೆ ಕರ್ತವ್ಯ ತೆರಳುತ್ತಿದ್ದಾಗ ಮಾಣಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಗಂಭೀರ ಗಾಯಗೊಂಡ ಧರ್ಣಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.