Categories: ಮಂಗಳೂರು

ವಿಟ್ಲ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಟ್ಲಪಡ್ನೂರು ಕೊಡಂಗಾಯಿ ನಿವಾಸಿ, ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿಯವರು ಮದುವೆಗೆ ಹೋಗಿ ಬಂದ ನಂತರ ಮನೇಲಿ ಇಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದೆ ಎಂದು ಠಾಣೆಗೆ ದೂರು ನೀಡಿದ್ದಾರೆ.
ಜೂ.8 ರಂದು ಮದುವೆ ಹೋಗುವ ವೇಳೆ ಚಿನ್ನಾಭರಣಗಳನ್ನು ಧರಿಸಿಕೊಂಡು ಹೋಗಿದ್ದು, ನಂತರ ಮದುವೆಯಿಂದ ಬಂದು ಮಲಗುವ ಕೋಣೆಯ ಗೋಡೆಯಲ್ಲಿ ರಚಿಸಲಾದ ಶೊಕೇಸ್ ನಲ್ಲಿ ಚಿನ್ನಾಭರಣಗಳನ್ನು ಇಟ್ಟಿದ್ದು, ಮರುದಿನ ಜೂ.9 ರಂದು ಮತ್ತೊಂದು ಮದುವೆಗೆ ಹೋಗಲು ಶೊಕೇಸ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳನ್ನು ನೋಡಿದಾಗ ಕಳವಾಗಿರುವುದು ಬೆಳಕಿಗೆ ಬಂದಿದೆ.
ಸುಮಾರು 32 ಗ್ರಾಂ ತೂಕದ ಚಿನ್ನದ ಸರ-01 ಅಂದಾಜು ಮೌಲ್ಯ-64000/- ಸುಮಾರು 20 ಗ್ರಾಂತೂಕದ ಚಿನ್ನದ ಬ್ರಾಸ್‌ ಲೈಟ್-01‌ ಅಂದಾಜು ಮೌಲ್ಯ-40,000/- ಒಟ್ಟು 12 ಗ್ರಾಂ ತೂಕದ ಚಿನ್ನದ ಉಂಗುರ-03 ಅಂದಾಜು 24,000/- ಸದ್ರಿ ಚಿನ್ನಾಭರಣಗಳ ಒಟ್ಟು ಮೌಲ್ಯ 1,28,000/- ಆಗಬಹುದು, ಗೊಲ್ಡ್‌ ಬಣ್ಣದ ಲೇಡಿಸ್‌ ರಿಸ್ಟ್‌ ವಾಚ್-01‌ ಅಂದಾಜು 500/- ರೂ, ಅರ್ಟಿಫಿಶಲ್‌ ಕೈ ಬಳೆ-01 ಅಂದಾಜು 100/- ರೂ. ಒಟ್ಟು ಅಂದಾಜು 1,28,600 ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ  ವಿಟ್ಲ ಠಾಣೆಯಲ್ಲಿ ಅ.ಕ್ರ 92/202 ಕಲಂ:380 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago