ಮಂಗಳೂರು: ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶುಕ್ರವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಎಸ್ ಡಿ ಎಂ ಕಾಲೇಜು, ಜಿಲ್ಲಾ ವಾಣಿಜ್ಯೋದ್ಯಮ ಸಂಘ ಹಾಗೂ ವಿಶ್ವವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣಾ ಕ್ರಮ ಕುರಿತ ಸಂವಾದಕ್ಕೆ ಚಾಲನೆ ನೀಡಿದರು.
ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದಾರೆ.