ಉಡುಪಿ : ಅಧಿಕಾರಕ್ಕೆ ಬಂದಾಗಿನಿOದ ಒಂದಿಲ್ಲೊOದು ನೂತನ ನಿರ್ಧಾರಗಳಿಂದ ಜನಪ್ರಿಯರಾಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಇಂದು ಅವರಿಗೆ ಹುಟ್ಟು ಹಬ್ಬ ಸಂಭ್ರಮ. ಸಚಿವರಾದ ಬಳಿಕ ಮೊದಲ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸದೇ ಸರಳ ಮತ್ತು ವಿಶೇಷವಾಗಿ ಆಚರಿಸಿಕೊಂಡು ಸಾರ್ವಜನಿಕರ ಗಮನ ಸೆಳೆದಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ, ಎಲ್ಲ ಲೈನ್ ಮ್ಯಾನ್ಗಳನ್ನು ತಮ್ಮ ಮನೆಗೆ ಆಹ್ವಾನಿಸಿ, ಅವರೊಂದಿಗೆ ಊಟ ಮಾಡಿದ್ದಾರೆ. ತಮ್ಮ ಹುಟ್ಟು ಹಬ್ಬದ ನಿಮಿತ್ತ ಲೈನ್ ಮ್ಯಾನ್ಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಲೈನ್ ಮ್ಯಾನ್ಗಳ ಮಧ್ಯೆ ಕುಳಿತು ಊಟ ಮಾಡಿದ್ದು, ಮಾತ್ರವಲ್ಲದೇ ಊಟ ಮಾಡುತ್ತಾ ಅವರ ಸಮಸ್ಯೆಯನ್ನು ಆಲಿಸಿದ್ದಾರೆ. ಸಚಿವರ ವಿಭಿನ್ನ ಹುಟ್ಟು ಹಬ್ಬ ಆಚರಣೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಗಿದೆ. ಅಲ್ಲದೇ ಇತರರಿಗೂ ಮಾದರಿಯಾಗಿದೆ.