News Karnataka Kannada
Friday, May 03 2024
ಮಂಗಳೂರು

ವಿ.ವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ ಭಟ್ಟರ ಆಹ್ವಾನ-ಎಸ್.ಎಫ್.ಐ ವಿರೋಧ

Mnglr
Photo Credit :
ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ 2021-22 ರ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರ್.ಎಸ್‌.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಆಹ್ವಾನಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ವಿರೋಧ ವ್ಯಕ್ತಪಡಿಸುತ್ತದೆ.
ಕೋಮು ಮತಾಂಧತೆಗೆ ವಿದ್ಯಾರ್ಥಿಗಳು ಬಲಿಯಾಗದಂತೆ ಎಚ್ಚರವಹಿಸುವ ಜವಾಬ್ದಾರಿ ಜಿಲ್ಲಾಡಳಿತಕ್ಕೆ ಇದೆ. ಧರ್ಮಾಧಾರಿತ ತಾರತಮ್ಯ, ಜನಾಂಗ ದ್ವೇಷಕ್ಕೆ ಕುಖ್ಯಾತರಾಗಿರುವ ಪ್ರಭಾಕರ್ ಭಟ್ ರಂತವರನ್ನು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾಗವಹಿಸದಂತೆ ಜಿಲ್ಲಾಡಳಿತ ಕ್ರಮಕೈಗೊಳ್ಳಲು ಒತ್ತಾಯಿಸುತ್ತದೆ.
ಕರಾವಳಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಕೋಮುವಾದಿ ಸಂಘಟನೆಗಳು ತಮ್ಮ ಮತೀಯ ದ್ರುವೀಕರಣದ ಅಜೆಂಡಾಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಸರಕಾರಿ ಶಾಲಾ ವಠಾರಗಳನ್ನು ದುರ್ಬಳಕೆ ಮಾಡುತ್ತಿರುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.
ಈಗಾಗಲೇ ಉಡುಪಿಯ ಶಾಲೆಯಲ್ಲಿ ಹಿಜಾಬ್ ನಿಂದ ಪ್ರಾರಂಭಗೊಂಡ ವಿಷಯಗಳು ಮತೀಯ ರೂಪ ಪಡೆದು ಕೇಸರಿ ಶಾಲು ಸೇರಿದಂತೆ ವಿದ್ಯಾರ್ಥಿಗಳ ನಡುವೆ ಪರಸ್ಪರ ಅಪನಂಬಿಕೆಗಳಿಗೆ, ಗುಂಪು ಘರ್ಷಣೆಗಳಿಗೆ ಎಡೆಮಾಡಿ ಕೊಟ್ಟಿರುವ ಘಟನೆಗಳು ನಮ್ಮ ಕಣ್ಣ ಮುಂದಿವೆ. ಈಗಾಗಲೇ ಹಿಜಾಬ್ ಕಾರಣಕ್ಕೆ ಬಹಳಷ್ಟು ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಬಹಳಷ್ಟು ವಿದ್ಯಾರ್ಥಿಗಳ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿ ಪರಿತಪಿಸುತ್ತಿದ್ದಾರೆ. ಇನ್ನೊಂದೆಡೆ ಶಿಕ್ಷಣವನ್ನು ಪಡೆಯಲು ಬರುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತವರ ಪೋಷಕರು ಇಂತಹ ಘಟನೆಗಳಿಂದ ಭೀತಿಗೊಳಗಾಗಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸಬೇಕಾಗಿದ್ದ ಕರ್ನಾಟಕ ರಾಜ್ಯದ ಬಿಜೆಪಿ ಸರಕಾರ ತನ್ನ ಆಡಳಿತ ವೈಫಲ್ಯ ಮರೆಮಾಚಲು ಇಂತಹ ಘಟನೆಗಳಿಗೆ ಕುಮ್ಮಕ್ಕನ್ನು ನೀಡುತ್ತಿದ್ದೆ.
ಆ ಕಾರಣಕ್ಕಾಗಿಯೇ ಸಂಘಪರಿವಾರ ಅಲ್ಪ ಸಂಖ್ಯಾತರನ್ನು ಗುರಿಯನ್ನಾಗಿಸಿ ಕೋಮು ಧ್ರುವೀಕರಣ ರಾಜಕಾರಣ ನಡೆಸಲು ಸರಕಾರಿ ಶಾಲೆಗಳಲ್ಲಿ ಪ್ರಾರಂಭಿಸಿ ಇದೀಗ ಕಾಲೇಜು ಕ್ಯಾಂಪಸ್ ಗಳನ್ನು ಮುಂದಿನ ಗುರಿಯನ್ನಾಗಿಸಿವೆ. ಅಂತಹ ಉದ್ದೇಶದಿಂದಲೇ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಕಾರ್ಯಕ್ರಮವೊಂದಕ್ಕೆ ಉದ್ಘಾಟಕರಾಗಿ ಆಹ್ವಾನಿಸಲಾಗಿದೆ. ಇದು ಮಂಗಳೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳ ನಡುವೆ ಪರಸ್ಪರ ಅಪನಂಭಿಕೆಗಳನ್ನು, ಕಂದರಗಳನ್ನು ಸೃಷ್ಟಿ ಮಾಡುವ ಸಾಧ್ಯತೆ ಇದೆ.
ಈ ರೀತಿ ಕಾಲೇಜು ಕ್ಯಾಂಪಸ್ ಗಳಿಗೆ ಸಂವಿಧಾನದ ಆಶಯಗಳಿಗೆ ವಿರುದ್ದವಾಗಿ ವರ್ತಿಸುವ, ಕೋಮು ಪ್ರಚೋದಿತ ದ್ವೇಷಗಳನ್ನು ಹರಡುವ ಮತ್ತು ಅವೈಜ್ಞಾನಿಕ ಮನೋಭಾನೆಗಳನ್ನು ಬಿತ್ತುವ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ವಿಶ್ವವಿದ್ಯಾನಿಲಯದ ಕಾರ್ಯಕ್ರಮದ ಉದ್ಘಾಟನೆಗೆ ಆಹ್ವಾನಿಸುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್.ಎಫ್.ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ.
ಇಂತಹ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅವಕಾಶ ಮಾಡಿಕೊಟ್ಟ ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ. ಪಿ. ಸುಬ್ರಮಣ್ಯ ಯಡಪಡಿತ್ತಾಯರ ನಡೆಯನ್ನು ಖಂಡಿಸುತ್ತದೆ. ಹಾಗೂ ಜಿಲ್ಲಾಡಳಿತ ದ.ಕ ಜಿಲ್ಲೆಯ ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ, ಕಾಲೇಜು ಕ್ಯಾಂಪಸ್ ಗಳಲ್ಲಿ ಶಾಂತಿ ಕದಡದಂತೆ ಮುಂಜಾಗ್ರತೆಯ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಕಲ್ಲಡ್ಕ ಪ್ರಭಾಕರ ಭಟ್ಟರು ಭಾಗವಹಿಸಲು ಅವಕಾಶ ನೀಡದಂತೆ ಕ್ರಮಕೈಗೊಳ್ಳಲು ಒತ್ತಾಯಿಸುತ್ತದೆ ಎಂದು ಎಸ್.ಎಫ್.ಐ ನ ಜಿಲ್ಲಾ ಮುಖಂಡರಾದ ವಿನಿತ್ ದೇವಾಡಿಗ , ವಿನುಶ ರಮಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು