Categories: ಮಂಗಳೂರು

ವೇಣೂರು: ಯುಗಲ ಮುನಿಗಳ ಮಂಗಳ ಪ್ರವಚನ ಕಾರ್ಯಕ್ರಮ

ವೇಣೂರು : ದೇವರು, ಗುರುಗಳು ಮತ್ತು ಶಾಸ್ತ್ರದಲ್ಲಿ ದೃಢ ನಂಬಿಕೆಯಿಂದ ಧರ್ಮದ ಮರ್ಮವನ್ನರಿತು ನಿತ್ಯವೂ ಬದುಕಿನಲ್ಲಿ ಶ್ರದ್ಧಾ-ಭಕ್ತಿಯಿಂದ ಅನುಷ್ಠಾನಗೊಳಿಸಿದರೆ ಜೀವನ ಪಾವನವಾಗುತ್ತದೆ ಎಂದು ಪೂಜ್ಯ ಅಮೋಘಕೀರ್ತಿ ಮುನಿ ಮಹಾರಾಜರು ಹೇಳಿದರು.

ಅವರು ವೇಣೂರಿನಲ್ಲಿ ಬಾಹುಬಲಿ ಕ್ಷೇತ್ರದಲ್ಲಿ ಮಂಗಲ ಪ್ರವಚನ ನೀಡಿದರು.ಆಗಮಗಳಲ್ಲಿ ಮುನಿಗಳ ಧರ್ಮ ಮತ್ತು ಶ್ರಾವಕರ ಧರ್ಮವನ್ನು ಉಲ್ಲೇಖಿಸಲಾಗಿದೆ. ಮುನಿಗಳ ಧರ್ಮವು ಅನುಷ್ಠಾನಕ್ಕೆ ಕಷ್ಟವಾಗಿದೆ. ಆದರೆ, ಶ್ರಾವಕರ ಧರ್ಮ ಸರಳವಾಗಿದ್ದು ಶ್ರಾವಕರು ನಿತ್ಯವೂ ಧರ್ಮದ ಪರಿಪಾಲನೆ ಮಾಡಬೇಕು. ಶ್ರಾವಕರು ಜಪ, ತಪ, ಧ್ಯಾನ, ಮುನಿಸೇವೆ, ದೇವರ ದರ್ಶನ ಸ್ವಾಧ್ಯಾಯ ಮೊದಲಾದ ಷಟ್ಕರ್ಮಗಳನ್ನು ಶ್ರದ್ಧೆಯಿಂದ ಮಾಡಿ ದುರ್ಲಭವಾದ ಮನುಷ್ಯ ಜನ್ಮವನ್ನು ಸಾರ್ಥಕಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.

ಪೂಜ್ಯ ಅಮರಕೀರ್ತಿ ಮುನಿ ಮಹಾರಾಜರು ಪ್ರವಚನ ನೀಡಿ, ಸಮ್ಯಕ್ ದರ್ಶನ, ಸಮ್ಯಕ್ ಜ್ಞಾನ ಮತ್ತು ಸಮ್ಯಕ್ ಚಾರಿತ್ರ್ಯ  ಎಂಬ ರತ್ನತ್ರಯ ಧರ್ಮದ ಪಾಲನೆಯಿಂದ ಪುಣ್ಯ ಸಂಚಯವಾಗುತ್ತದೆ. ಸ್ವಾಧ್ಯಾಯದೊಂದಿಗೆ ಜ್ಞಾನ ಭಂಡಾರವನ್ನು ವೃದ್ಧಿಸಿಕೊಂಡು ಉತ್ತಮ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ನಿತ್ಯವೂ ದೇವರ ದರ್ಶನ, ಧ್ಯಾನ ಮಾಡಿ ಸತ್ಕಾರ್ಯಗಳಲ್ಲಿ ತೊಡಗಿದರೆ ಹಾಗೂ ತೀರ್ಥ ಕ್ಷೇತ್ರಗಳ ದರ್ಶನ ಮಾಡಿದರೆ, ಪಾಪಕರ್ಮಗಳ ಕ್ಷಯವಾಗಿ ಅಕ್ಷಯ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಹೇಳೀದರು.

ಮೂಡಬಿದ್ರೆ ಜೈನ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರ್ವಹಿಸಿದರು. ವೇಣೂರಿನಲ್ಲಿ ಯುಗಲ ಮುನಿಗಳು ಭಗವಾನ್ ಬಾಹುಬಲಿ ದರ್ಶನ ಹಾಗೂ ಎಲ್ಲಾ ಬಸದಿಗಳ ದರ್ಶನ ಮಾಡಿದ ಬಳಿಕ ಮಂಗಳವಾರ ಪರುಷ ಗುಡ್ಡೆ ಬಸದಿಯಲ್ಲಿ ತಂಗಿದರು. ಇಂದು ನಾರಾವಿಗೆ ಹೋಗಿ ಗುರುವಾರ ಕಾರ್ಕಳ ಪುರಪ್ರವೇಶ ಮಾಡುವರು.

Gayathri SG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

31 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

48 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago