News Karnataka Kannada
Tuesday, May 07 2024
ಮಂಗಳೂರು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Dml
Photo Credit :

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಏಪ್ರಿಲ್ 27 ರಂದು ಸಂಜೆ 6.50ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ.

ಇದರ ನೋಂದಣಿ ಕಛೇರಿಯನ್ನು ಆದಿತ್ಯವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಹಾಗೂ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಧನಕೀರ್ತಿ ಆರಿಗ, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮಾಸ್ಟರ್, ಮಹಾವೀರ ಅಜ್ರಿ ಮತ್ತು ಊರ ಮಹನೀಯರು ಉಪಸ್ಥಿತರಿದ್ದರು.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 15ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648,

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು