ಬೆಳ್ತಂಗಡಿ : ಜೀರ್ಣೋದ್ಧಾರ ಗೊಳ್ಳುತ್ತಿರುವ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಹಪರಿವಾರ ಶಕ್ತಿಗಳ ಕ್ಷೇತ್ರ ಬೋಂಟ್ರೊಟ್ಟು ಬಳಂಜ ಇದರ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿರುವ ರೂ 2.00 ಲಕ್ಷ ದೇಣಿಗೆಯ ಚೆಕ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಬೋಂಟ್ರೊಟ್ಟು ಕ್ಷೇತ್ರದ ಟ್ರಸ್ಟ್ ಅರುಣ್ ಹೆಗ್ಡೆಯವರಿಗೆ ಮೇ 27 ರಂದು ಬೋಂಟ್ರೊಟ್ಟು ಕ್ಷೇತ್ರದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಯೋಜನಾಧಿಕಾರಿ ಪುಷ್ಪರಾಜ್, ಬೋಂಟ್ರೊಟ್ಟು ಕ್ಷೇತ್ರದ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್, ಕ್ಷೇತ್ರದ ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಬೋಂಟ್ರೊಟ್ಟು, ಗಣೇಶ್ ಬೋಂಟ್ರೊಟ್ಟು, ಸದಾನಂದ ಪೂಜಾರಿ ಬೋಂಟ್ರೊಟ್ಟು, ಜಾರಪ್ಪ ಪೂಜಾರಿ ಬೆಳಾಲು, ಗ್ರಾ.ಪಂ ಸದಸ್ಯ ಯಶೋಧರ ಶೆಟ್ಟಿ, ಒಕ್ಕೂಟದ ಅಧ್ಯಕ್ಷ ಡೀಕಯ್ಯ ಕುಲಾಲ್, ಸೇವಾಪ್ರತಿನಿಧಿ ಸಂಜೀವ ಕೆ, ಪ್ರಮೀಳಾ, ಸ್ಥಳೀಯರಾದ ಹರೀಶ್ ರೈ, ಸುರೇಶ್ ಪೂಜಾರಿ ಹೇವ,ನಿತ್ಯಾನಂದ ಹೆಗ್ಡೆ,ಅಶ್ವಿನ್ ಕುಮಾರ್ ಬಿ.ಕೆ. ಇನ್ನಿತರು ಉಪಸ್ಥಿತರಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…