ಬೆಳ್ತಂಗಡಿ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ರೆಡ್ ಕ್ರಾಸ್ ಮತ್ತು ಎನ್.ಎಸ್.ಎಸ್. ಘಟಕವು ಕೆ.ಎಂ.ಸಿ. ಮಂಗಳೂರು ಇವರ ಸಹಬಾಗಿತ್ವದೊಂದಿಗೆ, ಕಾಲೇಜಿನ ಪ್ರಾಚಾರ್ಯ ಡಾ| ಅಶೋಕ ಕುಮಾರ್ ಅವರ ಮಾರ್ಗದರ್ಶನದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವೃಂದವು ಸುಮಾರು 208 ಯೂನಿಟ್ ರಕ್ತದಾನ ಮಾಡಿದರು.