News Karnataka Kannada
Friday, May 03 2024
ಮಂಗಳೂರು

ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಬೇಡ: ಬಿರುವೆರ್ ಕುಡ್ಲ ಮನವಿ

Narayana Guru
Photo Credit : News Kannada

ಮಂಗಳೂರು: ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ ಎಂಬುದಾಗಿ ಬಿರುವೆರ್ ಕುಡ್ಲ ತಿಳಿಸಿದೆ.

ಶ್ರೀನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿನ ವಿರುದ್ಧ ಹೋರಾಟ ನಡೆಸಿದವರು. ಶ್ರೀ ಗುರುಗಳು ಸಮಾಜಕ ಸುಧಾರಕರಾಗಿ ಸಮಾಜದ ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಸಮಾಜದಲ್ಲಿ ಧರ್ಮ, ಅಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು. ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಇವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದ ಇರುವ ಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ. ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕುಂಟು ಮಾಡಲು ಮುಂದಾಗಿರುವುದು ಖೇದಕರ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದು, ಇಂತಹ ಹುನ್ನಾರಗಳ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು.

ಗಣರಾಜ್ಯೋತ್ಸವ ದಿನದಂದು ದಿಲ್ಲಿಯ ರಾಜಪಥದಲ್ಲಿ ಸಾಗುವ ಟ್ಯಾಬ್ಲೆಗಳ ಆಯ್ಕೆಗಾಗಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ.ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ ಎಂಬುದು ವಾಸ್ತವ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಬ್ರಹಗಳ ಧೈಯ ವಾಕ್ಯವನ್ನು ಪರಿಪಾಲಿಸುವ ಅವರ ಮಾರ್ಗದರ್ಶನ ಅನುಸರಿಸುವ ನಾಯಕರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು