Categories: ಮಂಗಳೂರು

ಸರಕಾರಿ ನೌಕರರಿಗೆ ಕೇಂದ್ರ ಮಾದರಿಯ ವೇತನ ಸಿಗಬಹುದು :ಸಿ.ಎಸ್. ಷಡಕ್ಷರಿ

ಬಂಟ್ವಾಳ: ಸರಕಾರಿ ನೌಕರರ ಸಂಘದ ಪ್ರಮುಖ ಬೇಡಿಕೆಯಾದ ಕೇಂದ್ರ ವೇತನ ಆಯೋಗ ಜಾರಿ ಹಾಗೂ ಹೊಸ ಪಿಂಚಣಿ ಯೋಜನೆ ರದ್ದತಿ ಆದಲ್ಲಿ ಸರಕಾರಿ ನೌಕರರು ಇನ್ನೂ ಉತ್ತಮವಾಗಿ ಹಾಗೂ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಿದೆ ಎಂದು ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.
ಅವರು ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಈ ಬಗ್ಗೆ ಇಂದಿನ ಅಧಿವೇಶನದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಾತನಾಡಿದ್ದಾರೆ. ಆದ್ದರಿಂದ ಈ ಬಾರಿ ರಾಜ್ಯ ಸರಕಾರಿ ನೌಕರರಿಗೆ ಕೇಂದ್ರ ಮಾದರಿಯ ವೇತನ ಸಿಗಬಹುದು ಎನ್ನುವ ವಿಶ್ವಾಸ ಇದೆ ಎಂದರು. ದೆಶದ ೨೫ ರಾಜ್ಯಗಳಲ್ಲಿ ಈಗಾಗಲೇ ಕೇಂದ್ರ ಮಾದರಿಯಲ್ಲಿ ವೇತನ ಪಾವತಿಯಾಗುತ್ತಿದೆ, ಆದ್ದರಿಂದ ನಾವು ಕೇಳುವುದು ನಮ್ಮ ಹಕ್ಕು ಎಂದರು.
ಸರಕಾರಿ ನೌಕರರ ಪರಿಶ್ರಮದಿಂದ ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ೨ನೇ ಸ್ಥಾನದಲ್ಲಿದೆ. ಅಭಿವೃದ್ಧಿಯಲ್ಲಿ ಕರ್ನಾಟಕ ೬ ನೇ ಸ್ಥಾನದಲ್ಲಿದೆ. ೨.೬ ಲಕ್ಷ ಹುದ್ದೆಗಳು ಖಾಲಿ ಇದೆ. ಇಂತಹ ಸಂಕಷ್ಟ ಸಮಯದಲ್ಲೂ ಉತ್ತಮವಾದ ಸೇವೆಯನ್ನು ರಾಜ್ಯದ ಸರಕಾರಿ ನೌಕರರು ನೀಡುತ್ತಿದ್ದಾರೆ ಎಂದರು.
ನೆರೆ ಹಾಗೂ ಕೋವಿಡ್ ಬಂದ ಸಂದರ್ಭದಲ್ಲಿ ರಾಜ್ಯರ ಸರಕಾರಿ ನೌಕರರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ತಮ್ಮ ಬಢಿಕೆಗಳ ಜೊತೆ ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರೆ  ಎಂದರು. ೮೭ ಇಲಾಖೆಗಳು ೬ ಲಕ್ಷ ನೌಕರರಿರುವ ಬೃಹತ್ ಸಂಘಟನೆಯಾಗಿರುವ ಸರಕಾರಿ ನೌಕರರ ಸಂಘ ಬೇರೆ ಯಾವ ರಾಜ್ಯದಲ್ಲೂ ಇಲ್ಲ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳಾದ  ಶ್ರೀನಿವಾಸ್, ಬಸವರಾಜ್, ಸುಬ್ರಹ್ಮಣ್ಯ ಸೇರಿಗಾರ್, ದಿನಕರ್ ಶೆಟ್ಟಿ, ಷೆರ್ಲಿ ಸುಮಾಲಿನಿ, ಶಿವಪ್ರಸಾದ್ ಶೆಟ್ಟಿ, ವಿಮಲ್ ನೆಲ್ಯಾಡಿ, ಬಂಟ್ವಾಳ ಸಮಿತಿಯ  ಅಧ್ಯಕ್ಷ ಉಮನಾಥ ರೈ, ಕಾರ್ಯದರ್ಶಿ ಸಂತೋಷ್ ಕುಮಾರ್ ತುಂಬೆ ಉಪಸ್ಥಿತರಿದ್ದರು.
Swathi MG

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

10 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

29 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

30 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

45 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

48 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago