Categories: ಮಂಗಳೂರು

ಸರ್ವರು ಜತೆಯಾದ ಕಾರ್ಯದಿಂದ ಸ್ವಚ್ಛ ಭಾರತ್ ಕಲ್ಪನೆ ಯಶಸ್ವಿ: ಡಾ.ಕುಮಾರ್

ಬಂಟ್ವಾಳ : ಪ್ರಜ್ಞಾವಂತಿಕೆಯ ದೀವಿಗೆಯನ್ನು ಹಚ್ಚುವಲ್ಲಿ ಸ್ವಚ್ಛತೆ ಅತಿ ಮುಖ್ಯವಾಗಿದ್ದು, ಜನಪ್ರತಿನಿಧಿಗಳು- ಸಾರ್ವಜನಿಕರು ಜತೆಯಾಗಿ ಕಾರ್ಯನಿರ್ವಹಿಸಿದಾಗ ಸ್ವಚ್ಛ ಭಾರತ್ ಕಲ್ಪನೆ ಯಶಸ್ವಿಯಾಗಲು ಸಾಧ್ಯ ಎಂದು ದ.ಕ.ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್‌ ಹೇಳಿದರು.
ಅವರು ಶುಕ್ರವಾರ ಕಾವಳಮೂಡೂರು ಗ್ರಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ), ಕಾವಳಮೂಡೂರು ಗ್ರಾ.ಪಂ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆದ ಸ್ವಚ್ಛತಾ ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇಡೀ ಜಿಲ್ಲೆಯ ಪ್ಲಾಸ್ಟಿಕನ್ನು ವೈಜ್ಞಾನಿಕವಾಗಿ ಮರುಬಳಕೆಯ ನಿಟ್ಟಿನಲ್ಲಿ ಜಿಲ್ಲೆಗೆ ೨.೫ ಕೋ.ರೂ.ವೆಚ್ಚದ ಎಂಆರ್‌ಐ ಘಟಕ ಮಂಜೂರಾಗಿದ್ದು, ಆದರೆ ಅದರ ಅನುಷ್ಠಾನಕ್ಕೆ ಎಲ್ಲಿ ಹೋದರೂ ತಪ್ಪು ಕಲ್ಪನೆಯಿಂದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮೂಲಭೂತ ಹಕ್ಕಿನ ಕುರಿತು ಮಾತನಾಡುವ ನಾವು ಕರ್ತವ್ಯದ ಕುರಿತು ಕೂಡ ಮಾತನಾಡಬೇಕಿದೆ ಎಂದವರು ಅಭಿಪ್ರಾಯಿಸಿದರು.
ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಹಾಯಕ ನಿರ್ದೇಶಕ ದಿನೇಶ್, ಗ್ರಾ.ಪಂ.ಉಪಾಧ್ಯಕ್ಷ ಅಜಿತ್, ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ, ತಾಲೂಕು  ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.
ಗ್ರಾಮೀಣ ಜನತೆಯಲ್ಲಿ ಪ್ಲಾಸ್ಟಿಕ್ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ತಂದವರಿಗೆ ಅಕ್ಕಿ ವಿತರಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಸ್ತಾವನೆಗೈದರು. ಸ್ವಚ್ಛಗ್ರಾಮದ ಪರಿಕಲ್ಪನೆ ಪ್ರತೀ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸಾಕಾರಗೊಳ್ಳಬೇಕಿದೆ, ಈ ಹಿನ್ನೆಲೆಯಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ  ಪತ್ರಕರ್ತರ ಸಂಘದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸಾಮಾಜಿಕ ಹೊಣೆಗಾರಿಕೆಯ ನಿಟ್ಟಿನಲ್ಲಿ ಪತ್ರಕರ್ತರ ಸಂಘ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿ ಗ್ರಾಮೀಣ ಜನತೆಯ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕೇವಲ ಕಾಟಾಚಾರದ ಕಾರ್ಯಕ್ರಮವನ್ನು ಮಾಡದೇ ಜನರ ನೋವನ್ನು ಅರಿತು ಅದಕ್ಕೆ ಪೂರಕ ಕಾರ್ಯಕ್ರಮ ಸಂಘಟಿಸಿರುವುದು ಶ್ಲಾಘನೀಯ ಎಂದು ಜಿ.ಪಂ.ಸಿಇಒ ಡಾ.ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್ ಸ್ವಾಗತಿಸಿದರು. ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಸಂದೀಪ್ ಸಾಲ್ಯಾನ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಗ್ರಾ.ಪಂ.ವ್ಯಾಪ್ತಿಯ ಎನ್.ಸಿ.ರೋಡ್ ಜಂಕ್ಷನ್ ನಿಂದ ಗ್ರಾ.ಪಂ.ಕಚೇರಿ ವಠಾರದವರೆಗೆ ಸ್ವಚ್ಛತಾ ಜಾಗೃತಿ ಜಾಥಾ ನಡೆಸಲಾಯಿತು. ಬಳಿಕ ಪತ್ರಕರ್ತರ ಸೇರುವಿಕೆಯಲ್ಲಿ ಜಾಗೃತಿ ಹಾಡು ಹಾಗೂ ರೂಪಕ ಪ್ರದರ್ಶಿಸಲಾಯಿತು.
Raksha Deshpande

Recent Posts

ಕನ್ನಡ ಸಾಹಿತ್ಯ ಪರಿಷತ್ ನಿಂದ ಶ್ರೀನಿವಾಸ್ ಪ್ರಸಾದ್ ರವರ ಶ್ರದ್ಧಾಂಜಲಿ ಸಭೆ

ಶ್ರೀನಿವಾಸ್ ಪ್ರಸಾದ್ ಎಂದರೆ ಸಾಮಾಜಿಕ ನ್ಯಾಯದ ಹರಿಕಾರ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್…

8 mins ago

2 ವರ್ಷದಲ್ಲಿ ಕಪ್ಪು ಬಣ್ಣದಿಂದ ಬಿಳಿ ಬಣ್ಣಕ್ಕೆ ತಿರುಗಿದ ನಾಯಿ !

ಕೆಲವು ರೋಗಗಳು ಮನುಷ್ಯರಲ್ಲಿ ಮಾತ್ರವಲ್ಲದೆ ವಿವಿಧ ರೀತಿಯ ಪ್ರಾಣಿಗಳಲ್ಲಿಯೂ ಕಂಡುಬರುತ್ತವೆ. ಪ್ರಸ್ತುತ ವಿಚಾರ ನೋಡುವುದಾದರೇ ಹೌದು ಎರಡು ವರ್ಷದ ಹಿಂದೆ…

19 mins ago

ಸಂಚಾರಕ್ಕೆ ಅಡಚಣೆ; ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಣಿಪಾಲ- ಅಲೆವೂರು ರಸ್ತೆಯು ಕಾಂಕ್ರೀಟ್ ಧೂಳಿನಿಂದ ಮುಳುಗಿಹೋಗಿದ್ದು, ಜನರು ಸಂಚರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಿದೆ.

29 mins ago

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ…

44 mins ago

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು…

1 hour ago

“ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ”

ಪ್ರಧಾನಿ ನರೇಂದ್ರ ಮೋದಿಯವರ ಸಾವಿನ ಕುರಿತಾಗಿ ಮಾತನಾಡಿ ಕಾಂಗ್ರೆಸ್​ ಶಾಸಕ ರಾಜು ಕಾಗೆ ವಿವಾದ ಹುಟ್ಟು ಹಾಕಿದ್ದಾರೆ. "ನರೇಂದ್ರ ಮೋದಿ…

1 hour ago