Categories: ಮಂಗಳೂರು

“ಸಿರಿ” ಗ್ರಾಮೋದ್ಯೋಗ ಸಂಸ್ಥೆಯಿಂದ ಗ್ರಾಮೀಣ ಮಹಿಳೆಯರ ಸಬಲೀಕರಣ

ಬೆಳ್ತಂಗಡಿ: ಶ್ರೀ ಧರ್ಮಸ್ಥಳದ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯಿಂದ 45 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕೆ ಅವಕಾಶ ನೀಡಿ ಸ್ವಾವಲಂಬಿ ಜೀವನಕ್ಕೆ ಮಾಹಿತಿ, ಮಾರ್ಗದರ್ಶನ ಮತ್ತು ಪ್ರೇರಣೆ ನೀಡಿ ಗ್ರಾಮೀಣ ಮಹಿಳೆಯರ ಸಬಲೀಕಣ ಮಾಡಲಾಗಿದೆ. ಇದರಿಂದಾಗಿ ಇಂದು ಲಕ್ಷಾಂತರ ಗ್ರಾಮೀಣ ಮಹಿಳೆಯರು ಮನೆ ಮತ್ತು ಕುಟುಂಬದ ಸುಗಮ ನಿರ್ವಹಣೆಯೊಂದಿಗೆ ಆರ್ಥಿಕವಾಗಿಯೂ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಬ್ಯಾಂಕ್ ಆಫ್ ಬರೋಡ ವತಿಯಿಂದ “ಸಿರಿ” ಗ್ರಾಮೋದ್ಯೋಗ ಸಂಸ್ಥೆಗೆ ಸಂಚಾರಿ ಮಾರಾಟ ಮಳಿಗೆ ವಾಹನ ಹಸ್ತಾಂತರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆಯರು ಇಂದು ಮನೆಯಿಂದ ಹೊರಗೆ ಬಂದು ವ್ಯವಹಾರ ಕುಶಲರಾಗಿ ಸಮಾಜದ ಮುಖ್ಯವಾಹಿನಿಯೊಂದಿಗೆ ಬೆರೆತು ಉತ್ತಮ ಸೇವೆ, ಸಾಧನೆ ಮಾಡುತ್ತಿದ್ದಾರೆ. ಈ ದಿಸೆಯಲ್ಲಿ ಹೇಮಾವತಿ ಹೆಗ್ಗಡೆಯವರ ಪ್ರೋತ್ಸಾಹವನ್ನೂ ಅವರು ಶ್ಲಾಘಿಸಿದರು.ಮಹಿಳೆಯರು ಉತ್ಪಾದಿಸಿದ ವಸ್ತುಗಳಿಗೆ “ಸಿರಿ” ಸಂಸ್ಥೆ ಮೂಲಕ ಮಾರುಕಟ್ಟೆ ವ್ಯವಸ್ಥೆ ಮಾಡುತ್ತಿದ್ದು “ಸಿರಿ” ಲಾಭದ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಹೇಳಿದರು.

ಬ್ಯಾಂಕ್ ಆಫ್ ಬರೋಡದ ಆಡಳಿತ ನಿರ್ದೇಶಕ ಅಜಯ ಕೆ. ಕುರಾನ ಮಾತನಾಡಿ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸೇವಾ ಕಳಕಳಿ ಮತ್ತು ಸಾಮಾಜಿಕ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಶಾಂತಿವನದಲ್ಲಿ ಪ್ರಶಾಂತ ಪರಿಸರದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವಿನ್ಯಾಸ, ಸೇವೆ ಮತ್ತು ಸೊಗಡನ್ನು ಅವರು ಪ್ರಶಂಸಿಸಿದರು.

“ಸಿರಿ” ಸಂಚಾರಿ ಮಾರಾಟ ಮಳಿಯನ್ನು “ಸಿರಿ” ಉತ್ಪನ್ನಗಳ ಜೊತೆಗೆ ಬ್ಯಾಂಕ್ ಪರಿಕರ ಹಾಗೂ ಉತ್ಪನ್ನಗಳ ಮಾರಾಟಕ್ಕೆ ಜಂಟಿಯಾಗಿ ಬಳಸಲಾಗುವುದು ಎಂದು ಅವರು ಹೇಳಿದರು.
ಬ್ಯಾಂಕ್ ಆಫ್ ಬರೋಡದ ಮಹಾ ಪ್ರಬಂಧಕರಾದ ಆರ್. ಗಾಯತ್ರಿ ಶುಭಾಶಂಸನೆ ಮಾಡಿದರು. ಡಿ.ಜಿಎಂ. ಆರ್. ಗೋಪಾಲಕೃಷ್ಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಉಪಸ್ಥಿತರಿದ್ದರು.

“ಸಿರಿ” ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್ ಸ್ವಾಗತಿಸಿದರು. ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳ ಶಾಖೆಯ ಪ್ರಬಂಧಕ ವಿಜಯ ಪಾಟೀಲ್ ಧನ್ಯವಾದವಿತ್ತರು. ಪ್ರಸನ್ನ ಕಾರ್ಯಕ್ರಮ ನಿರ್ವಹಿಸಿದರು.

Gayathri SG

Recent Posts

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

5 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

29 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

46 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

50 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

1 hour ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

2 hours ago