ಬೆಳ್ತಂಗಡಿ : ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಸುಗಮ ಬಸ್ ನಲ್ಲಿ ಬೆಳ್ತಂಗಡಿ ತಾಲೂಕಿನ ನಿಡ್ಲೆ ಸಮೀಪ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಪ್ರಯಾಣಿಕರೆಲ್ಲರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಾತ್ರಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನ ಮುಂಭಾಗದಲ್ಲಿ ಇಂಜಿನ್ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ಸನ್ನು ನಿಲ್ಲಿಸಿದ್ದಾನೆ. ಕೂಡಲೇ ಬಸ್ಸಿನಲ್ಲಿದ್ದವರನ್ನು ಬಸ್ಸಿನಿಂದ ಇಳಿಸಿದ್ದಾರೆ.
ಈ ವೇಳೆಗೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಈ ವೇಳೆಗೆ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ಸಂಪೂರ್ಣ ನಂದಿಸಿದ್ದಾರೆ.
ಬಸ್ಸಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಚಾಲಕ ಆರಂಭದಲ್ಲಿಯೇ ಗುರುರತಿಸಿ ಬಸ್ಸನ್ನು ನಿಲ್ಲಿಸಿದ ಕಾರಣ ಯಾವುದೇ ಹೆಚ್ಚಿನ ಅಪಾಯವಿಲ್ಲದೆ ಬೆಂಕಿ ನಂದಿಸಲು ಸಾಧ್ಯವಾಯಿತು.