News Karnataka Kannada
Wednesday, May 01 2024
ಮಂಗಳೂರು

ಸ್ಕೂಟರ್ ಸ್ಕಿಡ್ ಆಗಿ ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ ಚಿಕಿತ್ಸೆ ಫಲಕಾರಿಯಾಗದೆ ನಿಧನ

Health Inspecter
Photo Credit :
ಬಂಟ್ವಾಳ: ಕೆಲ ದಿನಗಳ ಹಿಂದೆ ಬಿ.ಸಿ.ರೋಡಿನಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಸ್ಕಿಡ್ ಆಗಿ ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ , ಬಿ.ಸಿ.ರೋಡ್ ನಿವಾಸಿ ಸುರೇಂದ್ರ ಮಯ್ಯ (71) ಚಿಕಿತ್ಸೆ ಫಲಕಾರಿಯಾಗದೆ ಫೆ.18ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಇಂದಿರಾ ಸಹಿತ ಇಬ್ಬರು ಪುತ್ರರನ್ನು ಅವರು ಹೊಂದಿದ್ದರು.
ಬಂಟ್ವಾಳ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸುಮಾರು 37 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿದ್ದ ಅವರು ಫೆ.6ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರ ಮುಂಭಾಗ ಸ್ಕೂಟರ್ ನಲ್ಲಿ ಮನೆ ಕಡೆ ಹೋಗುತ್ತಿದ್ದ ವೇಳೆ ಸ್ಕಿಡ್ ಆಗಿ ಬಿದ್ದಿದ್ದರು. ಕೂಡಲೇ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು