News Karnataka Kannada
Tuesday, May 07 2024
ಮಂಗಳೂರು

ಸ್ಕೇಟಿಂಗ್ ಪಟು‌ ಅನಘಾ ರಾಜೇಶ್ ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ

Anagha
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ‌ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ‌ ದಿನಾಚರಣೆ-2022 ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದ ಸ್ಕೇಟಿಂಗ್ ಪಟು ಕುಮಾರಿ‌ ಅನಘಾ ರಾಜೇಶ್ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಸಂಸದ ನಳಿನ್ ಕುಮಾರ್ ಕಟೀಲ್,ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್,ಜಿಲ್ಲಾ ಪಂಚಾಯತ್ ಸಿಇಓ ಡಾ.ಕುಮಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ತನ್ನ ನಾಲ್ಕನೇ ವಯಸ್ಸಿನಲ್ಲಿ ಸ್ಕೇಟಿಂಗ್ ತರಬೇತಿ ಆರಂಭಿಸಿ ಜಿಲ್ಲಾ,ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಒಟ್ಟು 26 ಚಿನ್ನದ ಪದಕ, 11 ಬೆಳ್ಳಿ ಪದಕ ಹಾಗೂ 8 ಕಂಚಿನ ಪದಕ‌ ಪಡೆದು ತನ್ನ 12 ನೇ ವಯಸ್ಸಿನಲ್ಲೇ ಅತ್ಯುನ್ನತ ಸಾಧನೆ ಮಾಡಿದ್ದಾರೆ.

ಮಂಗಳೂರಿನ‌ ಕದ್ರಿ‌ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾಗಿರುವ‌ ಅನಘಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ 6 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಅಂತರಾಷ್ಟ್ರೀಯ ಸ್ಕೇಟಿಂಗ್ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು