News Karnataka Kannada
Tuesday, April 30 2024
ಮಂಗಳೂರು

ಸ್ನೇಹಿತರ ನಡುವೆ ಕ್ಷುಲಕ ಕಾರಣಕ್ಕೆ ಜಗಳ: ಚೂರಿ ಇರಿತದಿಂದ ಇಬ್ಬರಿಗೆ ಗಾಯ

Crime
Photo Credit : News Kannada

ಬಂಟ್ವಾಳ : ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಕಾವಳಮೂಡೂರು ನಿವಾಸಿ ಪುರುಷ ಯಾನೆ ಪುರುಷೋತ್ತಮ ಹಾಗೂ ಬಿ.ಕಸಬಾ ನಿವಾಸಿ ಧನುಷ್ ಯಾನೆ ಧನಂಜಯ ಬಂಧಿತ ಆರೋಪಿಗಳು.

ಘಟನೆಯ ವಿವರ
ಸ್ನೇಹಿತರು ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡಿಕೊಂಡ ಬಳಿಕ ಚೂರಿ  ಇರಿತದಿಂದ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿತ್ತು. ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದು ಕೊಂಡಿದ್ದರು.

ಇರಿತದ ಪರಿಣಾಮ ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪ್ರಕರಣದ ಆರೋಪಿಗಳಾದ ಅರ್ಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರ ಪತ್ತೆಗಾಗಿ ಎಸ್.ಪಿ.ಹೃಷಿಕೇಶ್ ಸೋನಾವಣೆ ನಿರ್ದೇಶನ ದಂತೆ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತ್ರತ್ವದ ತಂಡ ರಚನೆ ಮಾಡಿದ್ದರು. ನಗರ ಠಾಣಾ ಪೋಲೀಸ್ ಇನ್ಸ್ಪೆಕ್ಟರ್ ವಿವೇಕಾನಂದ ನೇತ್ರತ್ವದ ಎಸ್.ಐ.ಅವಿನಾಶ್ ಅವರ ತಂಡ ಆರೋಪಿಗಳಿಬ್ಬರನ್ನು ಬಂಧಿಸಿದ್ದು ಉಳಿದ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು