Categories: ಮಂಗಳೂರು

ಸ್ವಂತ ಕಟ್ಟಡ ಇಲ್ಲದೆ ತ್ವರಿತ ಸೇವೆ ನೀಡಲು ಸಮಸ್ಯೆ : ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ : ತಾಲೂಕಿನಲ್ಲಿ ಅನೇಕ ಸರಕಾರಿ ಕಟ್ಟಡಗಳು ಸ್ವಂತ ಕಟ್ಟಡದಲ್ಲಿದ್ದು ಕೆಲವೊಂದು ಇಲಾಖೆಗಳಿಗೆ ಸ್ವಂತ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡದಲ್ಲಿದೆ. ಇದರಿಂದ ಅಧಿಕಾರಿಗಳಿಗೆ ಸಾರ್ವಜನಿಕರಿಗೆ ತ್ವರಿತ ಸೇವೆ ನೀಡಲು ಸಮಸ್ಯೆಯಾಗುತ್ತಿದ್ದು ಈ ಸಮಸ್ಯೆಗೆ ಪರಿಹಾರವಾಗಿ ತಾಲೂಕಿನ ಸರಕಾರಿ ಇಲಾಖೆಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

ಅವರು ಸೋಮವಾರ ಪದವಿಪೂರ್ವ ಕಾಲೇಜಿನ ಬಳಿ ವಾಣಿಜ್ಯ ತೆರಿಗೆ ಇಲಾಖೆಗೆ ೭೨ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಕಟ್ಟಡವು ಆದಷ್ಟು ಬೇಗ ನಿರ್ಮಾಣಗೊಂಡು ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ನೋಡಿಕೊಳ್ಳಲಾಗುವುದು ಎಂದರು.

ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಕಮಿಷನರ್ ವೀರೇಂದ್ರ ಪಾಟೇಲ್ ಮಾತನಾಡಿ ಕೆಲವು ಜಿಲ್ಲೆಗಳಲ್ಲಿ ಸರಕಾರದಿಂದ ಅನುದಾನಗಳು ಬಿಡುಗಡೆಯಾದರೂ ಕಾಮಗಾರಿ ಪ್ರಾರಂಭವಾಗಲು ಅನೇಕ ತಿಂಗಳುಗಳು ಬೇಕಾಗುತ್ತದೆ. ಆದರೆ ಬೆಳ್ತಂಗಡಿಯಲ್ಲಿ ಶಾಸಕರ ಕಾರ್ಯವೈಖರಿಯಿಂದ ಅನುದಾನ ಬಿಡುಗಡೆಗೊಂಡ ಒಂದು ತಿಂಗಳೊಳಗೆ ಕಾಮಗಾರಿ ಪ್ರಾರಂಭವಾಗುತ್ತಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ್ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ ನಾಯ್ಕ್, ಸದಸ್ಯರಾದ ಶರತ್, ಅಂಬರೀಶ್, ನಾಮನಿರ್ದೇಶನ ಸದಸ್ಯರಾದ ಪ್ರಕಾಶ್, ಕೇಶವ್, ಲಲಿತಾ, ಮುಖ್ಯಾಧಿಕಾರಿ ಸುಧಾಕರ್, ಲಾಯಿಲ ಗ್ರಾ.ಪಂ ಸದಸ್ಯ ಅರವಿಂದ್, ಸ್ಥಳೀಯರಾದ ಭುಜಂಗ ಶೆಟ್ಟಿ, ಕೃಷ್ಣಪ್ಪ ಭಂಡಾರಿ, ನಿರ್ಮಿತಿ ಕೇಂದ್ರದ ಇಂಜಿನಿಯರ್ ನವೀನ್, ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯಾಧಿಕಾರಿ ಸುಧಾಕರ್ ಸ್ವಾಗತಿಸಿ ಹಿರಿಯ ಜೆಸಿಐ ನ ಅಧ್ಯಕ್ಷ ಪ್ರಮೋದ್ ಕುಮಾರ್ ವಂದಿಸಿದರು.

Ashika S

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

14 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

21 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

39 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

44 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

59 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

1 hour ago