ಮಂಗಳೂರು

ಸ್ವಾತಂತ್ರ‍್ಯ ಹೋರಾಟಕ್ಕೆ ತುಳುನಾಡಿನಲ್ಲಿ ಮುನ್ನುಡಿ : ದಯಾನಂದ ಕತ್ತಲ್‌ಸಾರ್

ಮಂಗಳೂರು : ಸ್ವಾತಂತ್ರ‍್ಯ ಸಂಗ್ರಾಮಕ್ಕೆ ಬ್ರಿಟೀಷರ ವಿರುದ್ಧ ಹೋರಾಟ ಮಾಡುವ ಕೆಚ್ಚೆದೆಯನ್ನು ಪ್ರರ‍್ಶಿಸಿದ ಮೂಲ ವೀರಪುರುಷರು ನಮ್ಮ ತುಳುನಾಡಿನವರಾಗಿದ್ದು ಅವರ ತ್ಯಾಗವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು, ಇಂದು ಎಷ್ಟೋ ಮಂದಿಗೆ ಈ ವಿಷಯವೇ ತಿಳಿದಿಲ್ಲ ಈ ಬಗ್ಗೆ ತುಳುನಾಡಿನ ಜನತೆ ಕ್ರಾಂತಿ ವೀರರನ್ನು ಸ್ಮರಿಸಬೇಕು, ಮುಂದಿನ ದಿನದಲ್ಲಿ ಈ ಕ್ರಾಂತಿವೀರರನ್ನು ರಂಗಭೂಮಿಯ ಮೂಲಕ ಕನ್ನಡ, ತುಳು, ಹಿಂದಿ ಭಾಷೆಯಲ್ಲಿ ಪರಿಚಯಿಸಿ ಅವರ ಹೋರಾಟದ ಚಿತ್ರಣವನ್ನು ನೀಡುವ ಕಲ್ಪನೆ ತುಳು ಅಕಾಡೆಮಿಯಿಂದ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಹೇಳಿದರು.

ಅವರು ಮಂಗಳೂರಿನ ಹೊರವಲಯದ ಬಿರ‍್ನಕಟ್ಟೆಯಲ್ಲಿ ರ‍್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಜಂಟಿ ಸಂಯೋಜನೆಯಲ್ಲಿ ಪ್ರಥಮ ತುಳುನಾಡ ಸ್ವಾತಂತ್ರ‍್ಯ ಸಂಗ್ರಾಮದ ಕ್ರಾಂತಿ ವೀರರನ್ನು ಸ್ಮರಿಸುವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ತುಳುನಾಡಿನಲ್ಲಿ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಕ್ರಾಂತಿ ವೀರರ ವಂಶಸ್ಥರಾಗಿರುವ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು ತಮ್ಮ ಪೂಜ್ಯರ ಹಾಗೂ ಅಂದಿನ ಹೋರಾಟದ ಬಗ್ಗೆ ಸ್ಮರಿಸಿಕೊಂಡರು.

ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಕಾವ್ಯ ನಟರಾಜ್ ಆಳ್ವಾ ಅವರು ತುಳುವ ನಾಡಿನ ಮಾತೃಶ್ರೀ ಅವರ ರಥವನ್ನು ಅನಾವರಣಗೊಳಿಸಿದರು. ರಥವು ಬಿರ‍್ನಕಟ್ಟೆಯಿಂದ ಮಂಗಳೂರಿನ ಬಾವುಟಗುಡ್ಡೆಯವರೆಗೆ ಮೆರವಣಿಗೆಯ ಮೂಲಕ ಸಾಗಿತು. ಈ ವೇಳೆ ಧ್ವಜಾರೋಹನಗೈದು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು ತುಳುನಾಡಿನ ಸ್ವಾತಂತ್ರ‍್ಯ ಹೋರಾಟಗಾರರನ್ನು ಸ್ಮರಿಸುವ ಈ ಕಾರ್ಯಕ್ರಮ ಉತ್ತಮ ಕಾರ್ಯಕ್ರಮ ಮಂಗಳೂರಿನ ಠಾಗೂರ್‌ಪಾರ್ಕಿನಲ್ಲಿ ತುಳುನಾಡಿನ ಕ್ರಾಂತಿಕಾರಿ ಹೋರಾಟಗಾರರಲ್ಲಿ ಓರ್ವರಾದ ಕೆದಂಬಾಡಿ ರಾಮೇಗೌಡರ ಕಂಚಿನ ಪುತ್ಥಳಿಯನ್ನು ನಿರ್ಮಿಸುವ ಯೋಜನೆಯನ್ನು ಈಗಾಗಲೇ ಸರಕಾರ ಹಮ್ಮಿಕೊಂಡಿದ್ದು ಇದು ಸ್ವಾತಂತ್ರ‍್ಯ ಹೋರಾಟಗಾರರಿಗೆ ಸರಕಾರ ನೀಡುವ ಗೌರವ ಎಂದರು. ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ರ‍್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ನಾಗೇಶ್ ಕುಲಾಲ್ ಕುಳಾಯಿ, ದಿನೇಶ್ ರೈ ಕಡಬ, ಮಲ್ಲಿಕಾ ಅಜಿತ್‌ಕುಮಾರ್ ಶೆಟ್ಟಿ, ರಿಜಿಸ್ಟ್ರಾರ್ ಕವಿತಾ ಮತ್ತಿತರರು ಉಪಸ್ಥಿತರಿದ್ದರು.

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಸ್ವಾಗತಿಸಿ, ಪ್ರಸ್ತಾವನೆಗೈದರು, ಪ್ರಶಾಂತ್ ಭಟ್ ಕಡಬ ವಂದಿಸಿದರು, ಕರ‍್ಯಕ್ರಮದ ಸದಸ್ಯ ಸಂಚಾಲಕ ನರೇಂದ್ರ ಕೆರೆಕಾಡು ಕರ‍್ಯಕ್ರಮ ನಿರೂಪಿಸಿದರು.

Gayathri SG

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

21 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

31 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

36 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

43 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

53 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

57 mins ago