Categories: ಮಂಗಳೂರು

ಹಣ ಬಲದ ಎದುರು ಜನ ಬಲಕ್ಕೆ ಸೋಲಾಗಿದೆ: ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ

ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದಿಂದ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ , ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,’ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ.ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ.

‘2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ’.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು.ಈ ಚುನಾವಣೆಯಲ್ಲಿ ಜಯ ಗಳಿಸಿದ ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗೆ ನನ್ನ ಶುಭಾಶಯಗಳು’. ಎಂದು ಟ್ವೀಟ್ ಮಾಡಿದ್ದಾರೆ.

Sneha Gowda

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

18 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

41 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

1 hour ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago