News Karnataka Kannada
Thursday, May 02 2024
ಮಂಗಳೂರು

ಹಿಂದೂ ಯುವತಿಯ ಜತೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ಅಡ್ಡಗಟ್ಟಿ ಹಲ್ಲೆ

New Project 2021 12 11t095110.822
Photo Credit :

ಮಂಗಳೂರು :ನಗರದ ಹೊರವಲಯದ ನೀರುಮಾರ್ಗ ಎಂಬಲ್ಲಿ ಹಿಂದೂ ಯುವತಿಯ ಜತೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ

ಅಡ್ಯಾರ್ ಪದವು ನಿವಾಸಿ ಅಬ್ದುಲ್ ರಜಾಕ್ ಯಾನೆ ರಿಯಾಜ್ ಹಲ್ಲೆಗೊಳಗಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .ಹಿಂದು ಯುವತಿ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ನೀರುಮಾರ್ಗದ ಬಳಿ ಯುವಕರ ತಂಡ ತಡೆದು ನಿಲ್ಲಿಸಿದೆ ಯುವಕ ಯುವತಿಯನ್ನು ಕಾರಿನಲ್ಲಿ ಮಲ್ಲೂರು ಕಡೆಗೆ ತೆರಳುತ್ತಿದ್ದ ಎನ್ನಲಾಗಿದೆ .ಈ ಬಗ್ಗೆ ಮೊದಲೇ ಮಾಹಿತಿ ಇದ್ದ ಯುವಕರ ತಂಡ ಪಡು ಅಂಚೆ ಕಚೇರಿ ಬಳಿ ಕಾರನ್ನು ತಡೆದು ಯುವತಿ ಮತ್ತು ಯುವಕನನ್ನು ಪ್ರಶ್ನೆ ಮಾಡಿದ್ದಾರೆ ಇದೇ ವೇಳೆ ಮಾತಿಗೆ ಮಾತು ಬೆಳೆದಿದ್ದು ಅಬ್ದುರ್ರಝಾಕ್ ಮೇಲೆ ಐದಾರು ಮಂದಿ ತಂಡ ಹಲ್ಲೆ ನಡೆಸಿದೆ ಯುವಕನ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು ತಲೆಗೆ ಏಟು ಬಿದ್ದು ಗಾಯಗಳಾಗಿವೆ ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ ಯುವತಿ ಮೇಲೆ ಏಟು ಬಿದ್ದಿದ್ದು ಆಕೆ ಓಡಿ ತಪ್ಪಿಸಿಕೊಂಡಿದ್ದಾಳೆ .

ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಬಳಿಕ ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ತೆರಳಿದ್ದು ಕ್ರಮಕ್ಕೆ ಸೂಚಿಸಿದ್ದಾರೆ ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ ಅಲ್ಲದೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು