Categories: ಮಂಗಳೂರು

ಹಿಜಾಬ್ ವಿವಾದ: ಸಿಂಡಿಕೇಟ್ ನಿರ್ಣಯದ ಬಗ್ಗೆ ಮಧ್ಯಪ್ರವೇಶ ಸಾಧ್ಯವಿಲ್ಲ- ಜಿಲ್ಲಾಧಿಕಾರಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ವಿದ್ಯಾರ್ಥಿನಿಯರ ಜೊತೆಗೆ ನಡೆಸಿದ ಸಭೆ ಮುಕ್ತಾಯಗೊಂಡಿದೆ. ಸಿಂಡಿಕೇಟ್ ಸಭೆಯ ನಿರ್ಣಯವನ್ನು ಪಾಲಿಸಲು ಸೂಚಿಸಲಾಗಿದೆ. ಸಭೆಯಲ್ಲಿ ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಭಾಗಿಯಾಗಿದ್ದರು.

ಸಭೆಯ ಬಳಿಕ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆಯಲ್ಲಿ ಹಿಜಾಬ್ ಕಡ್ಡಾಯ ಮಾಡಿದ ಬಗ್ಗೆ ಆಕ್ಷೇಪಿಸಿದ ವಿದ್ಯಾರ್ಥಿನಿಯರು ಸಭೆಯಲ್ಲಿ ಭಾಗಿಯಾಗಿದ್ದರು. ಸಿಂಡಿಕೇಟ್ ಸಭೆಯ ನಿರ್ಧಾರವನ್ನು ಬದಲಿಸಲು ಜಿಲ್ಲಾಮಟ್ಟದಲ್ಲಿ ಸಾಧ್ಯವಿಲ್ಲ.

ಸಿಂಡಿಕೇಟ್ ಸಭೆಯ ನಿರ್ಧಾರವನ್ನು ಕಾಲೇಜಿನೊಳಗೆ ಪಾಲಿಸಬೇಕು. ಇದನ್ನು ಕಾನೂನು ರೀತ್ಯವಾಗಿ ನೋಡಬೇಕಾಗುತ್ತದೆಯೇ ಹೊರತು ಕಾಲೇಜಿನ ಆವರಣದಲ್ಲಿ ಶಾಂತಿ ಭಂಗವಾಗದಂತೆ ನೋಡಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳ ಜೊತೆ ಚರ್ಚಿಸಲಾಗಿದೆ. ಸಿಂಡಿಕೇಟ್ ಸಭೆಯಲ್ಲಿ ಹಿಜಾಬ್​ ಕುರಿತಾಗಿ ತೆಗೆದುಕೊಂಡ ನಿರ್ಣಯದ ಅಧಿಕೃತ ಪತ್ರ ತಮಗೆ ನೀಡಲ್ಲ.

ನಿರ್ಣಯವನ್ನು ವಾಟ್ಸ್​​ಆಯಪ್​ ಮೂಲಕ ರವಾನಿಸಿದ್ದಾರೆ ಎಂದು ವಿದ್ಯಾರ್ಥಿಗಳು ನಮ್ಮಲ್ಲಿ ದೂರಿದ್ದಾರೆ. ನಿರ್ಣಯ ಆದೇಶ ಪತ್ರವನ್ನು ಕೊಡಿಸುವುದಾಗಿ ತಿಳಿಸಿದ್ದೇನೆ. ಸಿಂಡಿಕೇಟ್ ನಿರ್ಧಾರವನ್ನು ಪಾಲನೆ ಮಾಡುವ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಲಾಗಿದೆ ಎಂದರು. ಹೈಕೋರ್ಟ್ ಆದೇಶದ ಅನ್ವಯ ಆಯಾ‌ ಸಂಸ್ಥೆಗಳು ನಿರ್ಧಾರ ತೆಗೆದುಕೊಳ್ಳುತ್ತವೆ. ಈ ಕಾಲೇಜಿನಲ್ಲಿ ಆದೇಶದ ವಿರುದ್ಧವಾದ ನಿರ್ಣಯ ತೆಗೆದುಕೊಂಡಿದ್ದರೆ, ಕಾನೂನು ರೀತಿಯಲ್ಲಿ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದೇವೆ ಎಂದರು.

Gayathri SG

Recent Posts

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

3 mins ago

ಕಾರು ಬೈಕಿನ ನಡುವೆ ಅಪಘಾತ; ಸವಾರ ಮೃತ್ಯು

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತಿಬ್ಬರಿಗೆ ಪೆಟ್ಟಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ…

9 mins ago

ಪರಶುರಾಮ ಮೂರ್ತಿಯ ಕಾಮಗಾರಿ ನಡೆಸಲು ಕಾಂಗ್ರೆಸ್ ಅಡ್ಡಿ: ನವೀನ್‌  ನಾಯಕ್

ಪರಶುರಾಮ ಮೂರ್ತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಕಾಮಗಾರಿ ಆರಂಭಕ್ಕೆ ಜಿಲ್ಲಾಡಳಿತ ತಡೆಯೊಡ್ಡುವ ಮೂಲಕ ಪರೋಕ್ಷವಾಗಿ…

29 mins ago

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ

ಗಂಡು ಹುಲಿಯೊಂದರ ಮೃತದೇಹ  ಬಂಡೀಪುರ ಹುಲಿ ಸಂರಕ್ಷಿತ  ಪ್ರದೇಶದ  ಮೈಸೂರು ಜಿಲ್ಲೆಯ  ಹೆಡಿಯಾಲ ಉಪ-ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ  ಪತ್ತೆಯಾಗಿದ್ದು, ವಯೋಸಹಜವಾಗಿ…

35 mins ago

15 ವರ್ಷದಿಂದ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ: ಪ್ರದೀಪ್ ಈಶ್ವರ್

ಕಳೆದ 15 ವರ್ಷದಿಂದ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ ಎಂದು ಚಿಕ್ಕಬಳ್ಳಾಪುರದ ಶಾಸಕ…

39 mins ago

ವರುಣನ ಆರ್ಭಟಕ್ಕೆ ಬೆಳೆ ನಷ್ಟ : ಬಿರುಗಾಳಿ ಮಳೆಗೆ ನೆಲಕಚ್ಚಿದ 8 ಎಕರೆ ಬಾಳೆ ಬೆಳೆ

ವರುಣ ಕ್ಷೇತ್ರದಲ್ಲಿ ವರುಣನ ಆರ್ಭಟಕ್ಕೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸುಮಾರು ಎಂಟು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆಗೊನೆ…

51 mins ago