Categories: ಮಂಗಳೂರು

ಹಿಜಾಬ್ ವಿವಾದ ಸೃಷ್ಟಿಸಿರುವರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ: ಯು.ಟಿ.ಖಾದರ್

 ಮಂಗಳೂರು: ಹಿಜಾಬ್ ವಿವಾದ ಸೃಷ್ಟಿಸಿರುವ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ. ಆಗ ನಮ್ಮ ದೇಶದ ಮಹತ್ವ ತಿಳಿಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಎಬ್ಬಿಸಿರುವ ವಿದ್ಯಾರ್ಥಿನಿಯರಿಗೆ ಶಾಸಕ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ.

ಸೋಮವಾರ ಮಂಗಳೂರಿನಲ್ಲಿರುವ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೊಂದಲ ಸೃಷ್ಟಿಸಿರುವ ವಿದ್ಯಾರ್ಥಿನಿಯರು ಒಮ್ಮೆ ಪಾಕಿಸ್ತಾನ, ಸೌದಿಯಂತಹ ರಾಷ್ಟ್ರಗಳಿಗೆ ಭೇಟಿ ನೀಡಿ ಬರಲಿ. ಆಗ ನಮ್ಮ ದೇಶದ ಮಹತ್ವ, ಕಾನೂನು ನಮಗೆ ನೀಡಿರುವ ಅವಕಾಶಗಳ ಕುರಿತು ಅರಿವಾಗುತ್ತದೆ ಎಂದರು.

ಹಿಜಾಬ್ ವಿಷಯದ ಕುರಿತಂತೆ ಇಲ್ಲಿ ಸುಮ್ಮನೆ ಗೊಂದಲ ಸೃಷ್ಟಿಸಲಾಗುತ್ತಿದೆ. ಕೆಲವೇ ಕೆಲವು ವಿದ್ಯಾರ್ಥಿನಿಯರಿಂದ ಹಲವು ಮಂದಿ ಸಮಸ್ಯೆ ಎದುರಿಸುವಂತಾಗಿದೆ. ಇತರೆ ಸಾವಿರಾರು ವಿದ್ಯಾರ್ಥಿನಿಯರು ಇಲ್ಲಿ ಕಲಿಯುತ್ತಿಲ್ಲವೇ? ಇವರಿಗೇನು ಕಲಿಯಲು ಎಂದು ಖಾದರ್ ಪ್ರಶ್ನಿಸಿದರು.

ಹಿಜಾಬ್ ಕುರಿತಂತೆ ತಮಗೆ ಇಷ್ಟ ಬಂದಂತೆ ಮಾತನಾಡುವ ಕೆಲವು ವಿದ್ಯಾರ್ಥಿನಿಯರು ಮೊದಲು ಈ ದೇಶದ ಬಗ್ಗೆ ತಿಳಿಯಲಿ. ಇಲ್ಲಿ ಪೂರ್ಣ ಸ್ವಾತಂತ್ರ್ಯವಿರುವುದರಿಂದ ಇದೆಲ್ಲಾ ಸಾಧ್ಯವಾಗುತ್ತಿದೆ. ಇದೇ ವಿಷಯವನ್ನು ಅವರು ವಿದೇಶದಲ್ಲಿ ಹೋಗಿ ಮಾತನಾಡಲಿ? ಆಗ ಅವರಿಗೆ ನೈಜತೆಯ ಅರಿವಾಗುತ್ತದೆ ಎಂದವರು ಹೇಳಿದರು.

ಇಲ್ಲಿ ಹುಲಿಯ ಹಾಗೆ ಪೋಸ್ ನೀಡುವವರು ವಿದೇಶದಲ್ಲಿ ವಿಮಾನ ಇಳಿಯುತ್ತಿದ್ದಂತೆ ಬೆಕ್ಕಿನಂತಾಗುತ್ತಾರೆ. ಇಲ್ಲಿರುವಾಗ ಅವರಿಗೆ ಅಕ್ಕಪಕ್ಕ ಬಾಡಿಗಾರ್ಡ್‌ಗಳು ಬೇಕು. ಅದೇ ವಿದೇಶದಲ್ಲಿ ಇಲಿಯಂತೆ ಇರುತ್ತಾರೆ. ನಮ್ಮ ದೇಶ ನೀಡಿರುವ ಸ್ವಾತಂತ್ರ್ಯದ ಬಗ್ಗೆ ಮೊದಲು ಅರಿತುಕೊಳ್ಳಬೇಕು ಎಂದು ಯು.ಟಿ.ಖಾದರ್ ಹೇಳಿದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago