News Karnataka Kannada
Thursday, May 02 2024
ಮಂಗಳೂರು

ಹಿರಿಯ ಪತ್ರಕರ್ತ ಕೆ.ಜಾನ್ ಅವರಿಗೆ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ

Condolences
Photo Credit :

ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ಜಾನ್‌ವಿಲ್ ಮರೈನ್ ಇನ್ಫಾರ್ಮೇಶನ್ ಪತ್ರಿಕೆಯ ಪ್ರಧಾನ ಸಂಪಾದಕ ಕೆ.ಜಾನ್ ಅವರಿಗೆ ಶ್ರದ್ಧಾಂಜಲಿ ಸಭೆ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ‌ ಕಾರ್ಯಕ್ರಮದಲ್ಲಿ ಜಾನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಲಾಯಿತು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಾಜಿ‌ ಅಧ್ಯಕ್ಷ ಪಿ.ಬಿ.ಹರೀಶ್ ರೈ    ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯಕಾರಿ ಸಮಿತಿ ಸದಸ್ಯ ಮಹಮ್ಮದ್ ಆರಿಫ್ ಪಡುಬಿದ್ರೆ, ನುಡಿನಮನ ಸಲ್ಲಿಸಿದರು. ಜಾನ್ ಅವರ ಪತ್ನಿ ರೋಸಮ್ಮ ಜಾನ್, ಮಕ್ಕಳಾದದ ಜೆನ್ಸಿ ಜಾನ್, ಜೀನಾ ಜಾನ್, ಅಳಿಯ ಜಯವೀರ್ ಕುಮಾರ್, ಪತ್ರಕರ್ತರ ಸಂಘದ ಪದಾಧಿಕಾರಿಗಳು, ಪತ್ರಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು