Categories: ಮಂಗಳೂರು

₹ 1200 ಕೋಟಿ ವೆಚ್ಚದಲ್ಲಿ ಶಿರಾಡಿ ಘಾಟ್ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರದ ಅನುಮೋದನೆ

ಮಂಗಳೂರು : ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ₹ 1200 ಕೋಟಿಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ.

ಎನ್.ಎಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ. ರಾಜ್ಯ ಸರಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಎಚ್. 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳಿಸಬಹುದಾಗಿದೆ. ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಎಚ್.ಎ.ಐ.ಗೆ ಕೇಂದ್ರ ಸಚಿವರು ಸೂಚಿದ್ದಾರೆ.ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Swathi MG

Recent Posts

ಪರಶುರಾಮ ಮೂರ್ತಿಯ ಕಾಮಗಾರಿ ನಡೆಸಲು ಕಾಂಗ್ರೆಸ್ ಅಡ್ಡಿ: ನವೀನ್‌  ನಾಯಕ್

ಪರಶುರಾಮ ಮೂರ್ತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಕಾಮಗಾರಿ ಆರಂಭಕ್ಕೆ ಜಿಲ್ಲಾಡಳಿತ ತಡೆಯೊಡ್ಡುವ ಮೂಲಕ ಪರೋಕ್ಷವಾಗಿ…

14 mins ago

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ

ಗಂಡು ಹುಲಿಯೊಂದರ ಮೃತದೇಹ  ಬಂಡೀಪುರ ಹುಲಿ ಸಂರಕ್ಷಿತ  ಪ್ರದೇಶದ  ಮೈಸೂರು ಜಿಲ್ಲೆಯ  ಹೆಡಿಯಾಲ ಉಪ-ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ  ಪತ್ತೆಯಾಗಿದ್ದು, ವಯೋಸಹಜವಾಗಿ…

20 mins ago

15 ವರ್ಷದಿಂದ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ: ಪ್ರದೀಪ್ ಈಶ್ವರ್

ಕಳೆದ 15 ವರ್ಷದಿಂದ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ ಎಂದು ಚಿಕ್ಕಬಳ್ಳಾಪುರದ ಶಾಸಕ…

24 mins ago

ವರುಣನ ಆರ್ಭಟಕ್ಕೆ ಬೆಳೆ ನಷ್ಟ : ಬಿರುಗಾಳಿ ಮಳೆಗೆ ನೆಲಕಚ್ಚಿದ 8 ಎಕರೆ ಬಾಳೆ ಬೆಳೆ

ವರುಣ ಕ್ಷೇತ್ರದಲ್ಲಿ ವರುಣನ ಆರ್ಭಟಕ್ಕೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸುಮಾರು ಎಂಟು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆಗೊನೆ…

36 mins ago

ಯೇನೆಪೋಯ ವಿಶ್ವ ವಿದ್ಯಾನಿಲಯದಲ್ಲಿ ಕೌಶಲ್ಯ ಮೌಲ್ಯಮಾಪನ ಕಾರ್ಯಾಗಾರ

ನರ್ಸಿಂಗ್ ಎಜುಕೇಶನ್ ವಿಭಾಗ, ಯೇನೆಪೋಯ ನರ್ಸಿಂಗ್ ಕಾಲೇಜು, ಹಾಗೂ ಯೇನೆಪೋಯ ವಿಶ್ವ ವಿದ್ಯಾನಿಲಯ, ಮಂಗಳೂರು. ಇದರ ಆಶ್ರಯದಲ್ಲಿ ದಿನಾಂಕ ೦೪.೦೫.೨೦೨೪…

39 mins ago

ಬೀದರ್ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ : ಸಾಗರ್ ಖಂಡ್ರೆ ಮನವಿ

'ಬೀದರ್ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿಯನ್ನು ಸಂಸತ್ತಿಗೆ ಗೆಲ್ಲಿಸಿ…

46 mins ago