News Karnataka Kannada
Wednesday, April 24 2024
Cricket
ಮಂಗಳೂರು

ಬರ್ಕಜೆ ಕ್ಷೇತ್ರದಲ್ಲಿ ಏಕಕಾಲದಲ್ಲಿ ಅಬ್ಬರಿಸಿದ 18 ಗುಳಿಗ ದೈವಗಳು

Guliga
Photo Credit : News Kannada

ಮಂಗಳೂರು: ಇದು ತುಳುನಾಡಿನ ದೈವಾರಾದನೆಯ ಇತಿಹಾಸದಲ್ಲೇ ಮೊದಲು. ಒಂದೇ ಬಾರಿ 18 ಗುಳಿಗ ದೈವದ ಗಗ್ಗರ ಸೇವೆ ನಡೆದಿದೆ. ಪುಣ್ಯಕ್ಷೇತ್ರ ಬರ್ಕಜೆ ನವ ಗುಳಿಗ ಕ್ಷೇತ್ರದಲ್ಲಿ ಈ ಬಾರಿ ವಿಶೇಷ ಎಂಬಂತೆ 18 ಗುಳಿಗ ದೈವದ ಗಗ್ಗರ ಸೇವೆ ನಡೆದು, ನೆರೆದಿದ್ದ ದೈವಾರದಕನ್ನು ರೋಮಾಂಚನ ಗೊಳಿಸಿತು. 18 ಗುಳಿಗನ ಅಬ್ಬರ ಕಂಡು ದೈವಾರಾಧಕರು ಮೂಕ ವಿಸ್ಮಿತರಾದರು.

ಬರ್ಕಜೆ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಒಂಬತ್ತು ಗುಳಿಗ ದೈವದ ನರ್ತನ ಸೇವೆ ನಡೆಯುತ್ತಿತ್ತು.‌ ಆದರೆ ಈ ಬಾರಿ ಸಂಪ್ರದಾಯದಂತೆ ಒಂಬತ್ತು ಹಾಗೂ ಸೇವೆಯಾಗಿ 9. ಹೀಗೆ ಒಟ್ಟು 18 ಗುಳಿಗ ದೈವದ ನರ್ತನ ಸೇವೆ ನಡೆದು ತುಳುನಾಡಿನ ದೈವಾರಾದನೆಯ ಇತಿಹಾಸದಲ್ಲೇ ಮೊದಲು ಎಂಬಂತಾಗಿದೆ.

ಇನ್ನೂ, 18 ಗುಳಿಗ ದೈವದ ವಿಶೇಷ ಗಗ್ಗರ ಸೇವೆಯನ್ನು ಕಣ್ತುಂಬಿಕೊಳ್ಳುವುದಕ್ಕೆ ಮುಂಬೈ ಬೆಂಗಳೂರು ಸೇರಿದಂತೆ ಕರಾವಳಿಯ ಸಾವಿರಾರು ದೈವಾರಾಕರು ಸೇರಿದ್ದರು. ಗುಳಿಗ ದೈವಗಳ ಗಗ್ಗರ ಸೇವೆ ಕಣ್ತುಂಬಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು