News Karnataka Kannada
Wednesday, May 15 2024
ಮಂಗಳೂರು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ವ್ಯವಸ್ಥೆ

2nd PUC annual exam: KSRTC arranges free travel
Photo Credit : News Kannada

ಮಂಗಳೂರು: ಮಾರ್ಚ್ 9ರಿಂದ ರಾಜ್ಯದಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕವೂ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ.

ಇದಕ್ಕೆ ಸಂಬಂಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಕೆಎಸ್ಸಾರ್ಟಿಸಿ ನಿಯಮಕ್ಕೆ ಪತ್ರ ಮೂಲಕ ಕೋರಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂದಿರುಗುವಾಗ ‘ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಕ್ಕೆ ಅನುಮತಿ ನೀಡಲು ಕೆಎಸ್ ಆರ್‌ಟಿಸಿ ನಿಗಮ ಸೂಚಿಸಿದೆ.

ಅದಷ್ಟೇ ಅಲ್ಲದೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು – ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕೆಎಸ್‌ಆರ್‌ಟಿಸಿ ನಿಗಮ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು